ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಕಡಿತ ವರದಿ ಸತ್ಯಕ್ಕೆ ದೂರ: ವಿತ್ತ ಸಚಿವಾಲಯ ಸ್ಪಷ್ಟನೆ
ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು, ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟ ಕಡಿಮೆ ಮಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ತನ್ನ ನೌಕರರ ನಿವೃತ್ತಿ ವೇತನ (ಪಿಂಚಣಿ)ಯನ್ನು ಕಡಿತಗೊಳಿಸಲಾಗುತ್ತಿದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.

ನವದೆಹಲಿ: ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು, ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟ ಕಡಿಮೆ ಮಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ತನ್ನ ನೌಕರರ ನಿವೃತ್ತಿ ವೇತನ (ಪಿಂಚಣಿ)ಯನ್ನು ಕಡಿತಗೊಳಿಸಲಾಗುತ್ತಿದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.
ಈ ಬಗ್ಗೆ ಕೇಂದ್ರ ವಿತ್ತ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಸರ್ಕಾರಿ ನೌಕರರ ಪಿಂಚಣಿ ಕಡಿತ ಮಾಡುವ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವಾಲಯ, ಕೇಂದ್ರ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವೇತನದಲ್ಲಿ ಶೇ.20ರಷ್ಟು ಸಂಬಳವನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ನಿವೃತ್ತ ಉದ್ಯೋಗಿಗಳ ಪಿಂಚಣಿ ಕಡಿತ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ನಮ್ಮ ಮುಂದೆ ಇಲ್ಲ ಎಂದು ಹೇಳಿದೆ.
ಹಿರಿಯ ನಾಗರಿಕರು, ವಿಕಲಚೇತನರು ಮತ್ತು ವಿಧವೆಯರು, ಕೇಂದ್ರ ಸರ್ಕಾರದ ಪಿಂಚಣಿ ಪಡೆಯುವ ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮದ (ಎನ್‌ಎಸ್‌ಎಪಿ) ಅಡಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಮೂರು ತಿಂಗಳ ಮುಂಗಡ ಪಿಂಚಣಿ ಪಡೆಯಲಿದ್ದಾರೆ. ಆದರೆ ಸಂಬಳ, ಪಿಂಚಣಿಯಲ್ಲಿ ಯಾವುದೇ ಕಡಿತವಿಲ್ಲ ಎಂದು ವಿತ್ತ ಸಚಿವಾಲಯ ಹೇಳಿದೆ.
ಎನ್‌ಎಸ್‌ಎಪಿ ಪ್ರಕಾರ, 80 ವರ್ಷ ಮೇಲ್ಪಟ್ಟವರಿಗೆ ಸಿಗಲಿರುವ ಪಿಂಚಣಿ ಮೊತ್ತದಲ್ಲಿ ಕಡಿತ ಮಾಡಲಾಗಿದೆ. ಮಿಕ್ಕವರಿಗೂ ಇದು ಅನ್ವಯವಾಗಬಹುದು, ಜವಾನ(peon) ನಿಂದ ಮಾಜಿ ರಾಷ್ಟ್ರಪತಿಗಳ ತನಕ ಎಲ್ಲರ ಪಿಂಚಣಿ ಮೊತ್ತವೂ ಕಡಿತ ಎಂಬ ಸುದ್ದಿಯನ್ನು ಕೆಲ ಮಾಧ್ಯಮಗಳು ಪ್ರಸಾರ ಮಾಡಿದ್ದರಿಂದ ಗೊಂದಲ ಉಂಟಾಗಿತ್ತು. ಏಪ್ರಿಲ್ 6ರಂದು ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಸಂಸದರ ಸಂಬಳದಲ್ಲಿ ಶೇ 30ರಷ್ಟು ಕಡಿತಗೊಳಿಸುವ ಬಗ್ಗೆ ಮಾತ್ರ ನಿರ್ಣಯ ಕೈಗೊಳ್ಳಲಾಯಿತು ಎಂದು ಪಿಐಬಿ ಕೂಡಾ ಸ್ಪಷ್ಟಪಡಿಸಿದೆ.
It is being reported that a 20% cut in Central Government Pensions is being planned.This news is FALSE. There will be no cut in pension disbursements. It is clarified that salaries and pensions will not be affected by Government Cash Management instructions.@PIBFactCheck https://t.co/hlZpnbxnJx
— Ministry of Finance
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


