ಮುಸ್ಲಿಂರ ವಿರುದ್ಧ ತಾರತಮ್ಯ: ಇಮ್ರಾನ್ ಖಾನ್ ಆರೋಪ ಆಧಾರ ರಹಿತ, ಹಾಸ್ಯಾಸ್ಪದ- ಭಾರತ ತಿರುಗೇಟು
ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಭಾರತದಲ್ಲಿನ ಮುಸ್ಲಿಂರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಆರೋಪವನ್ನು ಭಾರತ ತಳ್ಳಿ ಹಾಕಿದೆ.

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಭಾರತದಲ್ಲಿನ ಮುಸ್ಲಿಂರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಆರೋಪವನ್ನು ಭಾರತ ತಳ್ಳಿ ಹಾಕಿದೆ.
ಆ ದೇಶದ ಆಂತರಿಕ ವ್ಯವಹಾರಗಳ ಅಸಹ್ಯ ನಿರ್ವಹಣೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ನಿಟ್ಟಿನಲ್ಲಿ ಪಾಕಿಸ್ತಾನದ ಪ್ರಧಾನಿ ವಿಲಕ್ಷಣಕಾರಿ ಹೇಳಿಕೆಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರಿವಾಸ್ತವ ಹೇಳಿದ್ದಾರೆ.
ಕೊರೋನಾವೈರ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತೀಯ ಸರ್ಕಾರ ಉದ್ದೇಶಪೂರ್ವಕವಾಗಿ ಮುಸ್ಲಿಂರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು, ಕೋವಿಡ್-19 ವಿರುದ್ಧದ ಹೋರಾಟದ ಬದಲು ನೆರೆಯ ರಾಷ್ಟ್ರದ ಮೇಲೆ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಅಲ್ಪಸಂಖ್ಯಾತರ ವಿಚಾರದಲ್ಲಿ ಆ ದೇಶದಲ್ಲಿಯೇ ನಿಜವಾಗಿಯೂ ತಾರತಮ್ಯಕ್ಕೊಳಗಾಗಿರುವವರ ಬಗ್ಗೆ ಪಾಕಿಸ್ತಾನ ಪ್ರಧಾನ ಕಾಳಜಿ ವಹಿಸಬೇಕಾಗಿದೆ ಎಂದು ಶ್ರೀವಾಸ್ತವ ಹೇಳಿದ್ದಾರೆ.
ಮುಸ್ಲಿಂರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕೆಂದು ಇಸ್ಲಾಮಿಕ್ ಸಹಕಾರ ಸಂಘಟನೆ ಭಾನುವಾರ ಭಾರತವನ್ನು ಒತ್ತಾಯಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


