ಲಾಕ್ ಡೌನ್: ಮನೆಯಲ್ಲಿ ರೇಷನ್ ಇಲ್ಲ ಎಂದು ಹಬ್ಬದ ಅಡುಗೆಗಾಗಿ ಕಾಳಿಂಗ ಸರ್ಪ ಕೊಂದು ತಿಂದ ಭೂಪರು
ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಲಾಕ್‍ಡೌನ್‌ಗೆ ಆದೇಶಿಸಿದ್ದರೆ, ಅರುಣಾಚಲ ಪ್ರದೇಶದಲ್ಲಿ ಬೇಟೆಗಾರರ ಗುಂಪೊಂದು ಹಬ್ಬದೂಟಕ್ಕಾಗಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊಂದಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಗುವಾಹಟಿ: ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಲಾಕ್‍ಡೌನ್‌ಗೆ ಆದೇಶಿಸಿದ್ದರೆ, ಅರುಣಾಚಲ ಪ್ರದೇಶದಲ್ಲಿ ಬೇಟೆಗಾರರ ಗುಂಪೊಂದು ಹಬ್ಬದೂಟಕ್ಕಾಗಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊಂದಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ವಿಡಿಯೊದಲ್ಲಿ ಮೂವರು ಯುವಕರು ತಮ್ಮ ಭುಜದ ಮೇಲೆ ವಿಷಪೂರಿತ ಹಾವಿನೊಂದಿಗೆ ಕಾಣಿಸಿಕೊಂಡಿದ್ದು, ಅವರು ಸರಿಸೃಪವನ್ನು ಕಾಡಿನಲ್ಲಿ ಕೊಂದಿದ್ದಾಗಿ ಹೇಳಿಕೊಂಡಿದ್ದಾರೆ.
ಅವರು ಹಬ್ಬಕ್ಕಾಗಿ ಎಲ್ಲ ವ್ಯವಸ್ಥೆಗಳನ್ನು ಮಾಡಿದ್ದರು. ಹಾವಿನ ಮಾಂಸವನ್ನು ತುಂಡು ಮಾಡಿ ಸ್ವಚ್ಛಗೊಳಿಸಲು ಬಾಳೆ ಎಲೆಗಳನ್ನು ಹರಿಡಿದ್ದರು. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಲಾಕ್‌ಡೌನ್ ಆಗಿರುವುದರಿಂದ ತಮಗೆ ಅಕ್ಕಿಯೂ ಇರಲಿಲ್ಲ ಎಂದು ಒಬ್ಬಾತ ತಿಳಿಸಿದ್ದಾನೆ. ಈ ಮಧ್ಯೆ ಕಾಡಿಗೆ ತೆರಳಿದಾಗ ಕಾಳಿಂಗ ಸರ್ಪ ಕಾಣಿಸಿತು.
ಅದನ್ನು ಹೊಡೆದು ಕೊಂದೆವು ಎಂದು ಮತ್ತೊಬ್ಬ ವ್ಯಕ್ತಿ ವಿಡಿಯೊದಲ್ಲಿ ಹೇಳಿದ್ದಾನೆ. ಕಾಳಿಂಗ ಸರ್ಪವನ್ನು ಕೊಂದವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಅವರು ತಲೆಮರೆಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


