ಜಬಲ್ ಪುರ: ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೋನಾ ಸೋಂಕಿತ ಅರೆಸ್ಟ್
ಜಬಲ್ ಪುರದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೋನಾ ಸೋಂಕಿತನನ್ನು ಎನ್ ಎಸ್ ಎ ಸಿಬ್ಬಂದಿ ಬಂಧಿಸಿದ್ದಾರೆ.

ಭೂಪಾಲ್: ಜಬಲ್ ಪುರದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೋನಾ ಸೋಂಕಿತನನ್ನು ಎನ್ ಎಸ್ ಎ ಸಿಬ್ಬಂದಿ ಬಂಧಿಸಿದ್ದಾರೆ.
ಜಾವೇದ್ ಖಾನ್ ಬಂಧಿತ ಆರೋಪಿ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯಿಂದ ಪರಾರಿಯಾಗಿದ್ದವನನ್ನು ಸೋಮವಾರ ಬೆಳಗ್ಗೆ ಬಂಧಿಸಲಾಗಿದೆ.
ಭಾನುವಾರ ಮಧ್ಯಾಹ್ನ 3 ಗಂಟೆಗೆ ಎಸ್ಕೇಪ್ ಆಗಿದ್ದ ಆರೋಪಿ ಜಬಲ್ ಪುರ ಹೊರವಲಯದಿಂದ ಯಾವುದೋ ಲಾರಿಯಲ್ಲಿ ನರಸಿಂಗಪುರ ತಲುಪಿದ್ದ. ಅಲ್ಲಿಂದ ಇಂದೋರ್ ಗೆ ಬೈಕ್ ನಲ್ಲಿ ತೆರಳಲು ಪ್ರಯತ್ನಿಸಿದ್ದ.
ಈ ಸಂಬಂಧ ಪೊಲೀಸರು ಎಲ್ಲೆಡೆ ಮಾಹಿತಿ ನೀಡಿದ್ದರಿಂದ ಆತನನ್ನು ಬಂಧಿಸಲು ಸಾಧ್ಯವಾಗಿದೆ. ಜಬಲ್ ಪುರದಿಂದ 80 ಕಿಮೀ ದೂರದಲ್ಲಿರುವ ಚೆಕ್ ಪೋಸ್ಚ್ ನಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


