ದೇಶ

ಕೊರೋನಾ ವೈರಸ್: ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯನನ್ನೂ ಬಲಿಪಡೆದ ಮಹಾಮಾರಿ

ಕೊರೋನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯರೊಬ್ಬರನ್ನು ಮಹಾಮಾರಿ ವೈರಸ್ ಸೋಮವಾರ ಬಲಿಪಡೆದುಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಕೊರೋನಾ ವೈರಸ್: ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯನನ್ನೂ ಬಲಿಪಡೆದ ಮಹಾಮಾರಿ
ಸಂಗ್ರಹ ಚಿತ್ರ
Published On :

ಮೊರಾಬಾದ್: ಕೊರೋನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯರೊಬ್ಬರನ್ನು ಮಹಾಮಾರಿ ವೈರಸ್ ಸೋಮವಾರ ಬಲಿಪಡೆದುಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. 

ಕೆಲ ದಿನಗಳ ಹಿಂದಷ್ಟೇ ಸೋಂಕಿಗೊಳಗಾಗಿದ್ದ ವೈದ್ಯರು ತೀರ್ಥಾಂಕೆರ್ ಮಹಾವೀರ್ ಯುನಿವರ್ಸಿಟಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ವೈದ್ಯರು ಮೃತಪಟ್ಟಿದ್ದಾರೆಂದು ಮೊರಾದಾಬಾದ್ ಮುಖ್ಯ ವೈದ್ಯಕೀಯ ಅಧಿಕಾರಿ ಡಾ.ಎಂ.ಸಿ.ಗರ್ಗ್ ಅವರು ಮಾಹಿತಿ ನೀಡಿದ್ದಾರೆ. 

ಪ್ರಸ್ತುತ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿರುವ ಪ್ರಕಾರ, ಉತ್ತರಪ್ರದೇಶದಲ್ಲಿ ಈ ವರೆಗೂ 1084 ಪ್ರಕರಣಗಳು ಪತ್ತೆಯಾಗಿದ್ದು, 108 ಮಂದಿ ಗುಣಮುಖರಾಗಿದ್ದಾರೆಂದು ತಿಳಿಸಿದೆ. 

ವೈದ್ಯರ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಅವರಿಗೆ ವೆಂಟಿಲೇಟರ್ ವ್ಯವಸ್ಥೆ ಅಳವಡಿಸಲಾಗಿತ್ತು. ಆದರೆ, ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.