ದೇಶ

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ

ದೇಶದಲ್ಲಿ ಕೊರೋನಾ ವೈರಸ್ ತಲೆನೋವು ಒಂದೆಡೆಯಾದರೆ, ಗಡಿಯಲ್ಲಿ ಉಗ್ರರ ಕಾಟ ಮತ್ತೊಂದೆಡೆಯಾಗಿದೆ. ಕೊರೋನಾ ಭಿತಿ ನಡುವಲ್ಲೇ ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಸಂಗ್ರಹ ಚಿತ್ರ
Published On :

ಶ್ರೀನಗರ: ದೇಶದಲ್ಲಿ ಕೊರೋನಾ ವೈರಸ್ ತಲೆನೋವು ಒಂದೆಡೆಯಾದರೆ, ಗಡಿಯಲ್ಲಿ ಉಗ್ರರ ಕಾಟ ಮತ್ತೊಂದೆಡೆಯಾಗಿದೆ. ಕೊರೋನಾ ಭಿತಿ ನಡುವಲ್ಲೇ ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೆಲಾಹುಲಾ ಎಂಬ ಪ್ರದೇಶದಲ್ಲಿ ಸೇನಾಪಡೆ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. 

ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆಗಿಳಿದಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಚುರುಕುಗೊಂಡ ಸೇನಾಪಡೆಗಳು ಕಾರ್ಯಾಚರಣೆಯನ್ನು ಎನ್ಕೌಂಟರ್'ಗೆ ಮಾರ್ಪಡಿಸಿ ಮೊದಲಿಗೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದರು. ಬಳಿಕ ಮತ್ತಷ್ಟು ಉಗ್ರರು ಅಡಗಿಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಿ ಮತ್ತಿಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಲಾಗುತ್ತಿದ್ದು, ಹತ್ಯೆಯಾದ ಉಗ್ರರ ಕುರಿತು ಸೇನಾಪಡೆಗಳು ಮಾಹಿತಿ ಕಲೆ ಹಾಕುತ್ತಿವೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.