ಉತ್ತರ ಪ್ರದೇಶ: ಮೊರಾದಾಬಾದ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 5 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, 73 ಪೊಲೀಸರು ಕ್ವಾರಂಟೈನ್'ಗೆ
ಉತ್ತರಪ್ರದೇಶದಲ್ಲಿ ಕೊರೋನಾ ವೈರಸ್ ರೌದ್ರನರ್ತನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ನಡುವೆ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಮೊರಾಬಾದ್ ನಲ್ಲಿ ನಡೆದ ಹಲ್ಲೆ ಘಟನೆ ಬಳಿಕ ಆಘಾತಕಾರಿ ವಿಷಯವೊಂದು ಇದೀಗ ಬಹಿರಂಗಗೊಂಡಿದೆ.

ನವದೆಹಲಿ: ಉತ್ತರಪ್ರದೇಶದಲ್ಲಿ ಕೊರೋನಾ ವೈರಸ್ ರೌದ್ರನರ್ತನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ನಡುವೆ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಮೊರಾಬಾದ್ ನಲ್ಲಿ ನಡೆದ ಹಲ್ಲೆ ಘಟನೆ ಬಳಿಕ ಆಘಾತಕಾರಿ ವಿಷಯವೊಂದು ಇದೀಗ ಬಹಿರಂಗಗೊಂಡಿದೆ.
ಮೊರಾದಾಬಾದ್ ನಲ್ಲಿ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆಯಲ್ಲಿ ಭಾಗಿಯಾಗಿದ್ದ ಹಲವು ಮಂದಿಯ ಪೈಕಿ ಐವರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಐವರಲ್ಲಿ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಹಿಂಸಾಚಾರದ ವೇಳೆ ಕಾರ್ಯನಿರ್ವಹಿಸಿದ್ದ 73 ಮಂದಿ ಉತ್ತರಪ್ರದೇಶದ ಪೊಲೀಸರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಸಂಬಂಧ ಪೊಲೀಸರು ಈ ವರೆಗೂ 17 ಮಂದಿಯನ್ನು ಬಂಧನಕ್ಕೊಳಪಡಿಸಿದ್ದರು. ಈ 17 ಮಂದಿಯ ಪೈಕಿ ಐವರಲ್ಲಿ ವೈರಸ್ ದೃಢಪಟ್ಟಿದೆ.
ಇದೀಗ ಹಿಂಸಾಚಾರದ ವೇಳೆ ಕಾರ್ಯನಿರ್ವಹಿಸಿದ್ದ 73 ಮಂದಿ ಪೊಲೀಸರನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಎಲ್ಲರನ್ನೂ ಕ್ವಾರಂಟೈನ್ ನಲ್ಲಿರಿಸಲಾಗಿದೆ. ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ. ಪರಿಸ್ಥಿತಿ ನಿಭಾಯಿಸಲು ನಮ್ಮಲ್ಲಿ ಸಾಕಷ್ಟು ಪೊಲೀಸ್ ಸಿಬ್ಬಂದಿಗಳಿದ್ದಾರೆಂದು ಎಂದು ಪೊಲೀಸ್ ಅಧಿಕಾರಿ ಅಮಿತ್ ಪಥಕ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


