ಕೊವಿಡ್-19: ದೆಹಲಿ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಐಎಸ್ಎಫ್ ಪೇದೆಗೆ ಪಾಸಿಟಿವ್
ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಪೇದೆಯೊಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಶುಕ್ರವಾರ ಸಿಐಎಸ್ಎಫ್ ಮೂಲಗಳು ತಿಳಿಸಿವೆ.

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಪೇದೆಯೊಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಶುಕ್ರವಾರ ಸಿಐಎಸ್ಎಫ್ ಮೂಲಗಳು ತಿಳಿಸಿವೆ.
ಸಿಐಎಸ್ಎಫ್ ಮೂಲಗಳ ಪ್ರಕಾರ, ಸೋಂಕಿತ ಪೇದೆಯನ್ನು ಹರಿಯಾಣದ ಜಾಜ್ಜರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿಯಲ್ಲಿ ಇದುವರೆಗೆ 2,376 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಈ ಪೈಕಿ 808 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಚ್ ಆಗಿದ್ದಾರೆ. 50 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


