ಒಡಿಸ್ಸಾ ಮೂಲದ ಮನೆ ಕೆಲಸದಾಕೆಯ ಅಂತ್ಯ ಸಂಸ್ಕಾರ ನೆರವೇರಿಸಿದ ಗೌತಮ್ ಗಂಭೀರ್
ಅನಾರೋಗ್ಯದಿಂದ ಸಾವನ್ನಪ್ಪಿದ ಮನೆಕೆಲಸದಾಕೆಯ ಅಂತ್ಯ ಸಂಸ್ಕಾರವನ್ನು ತಾವೇ ನಡೆಸಿದ ಕ್ರಿಕೆಟಿಗ ಮತ್ತು ರಾಜಕಾರಣಿ ಗೌತಮ್ ಗಂಭೀರ್ ಮಾನವೀಯತೆ ಮೆರೆದಿದ್ದಾರೆ.

ಜೈಪುರ: ಅನಾರೋಗ್ಯದಿಂದ ಸಾವನ್ನಪ್ಪಿದ ಮನೆಕೆಲಸದಾಕೆಯ ಅಂತ್ಯ ಸಂಸ್ಕಾರವನ್ನು ತಾವೇ ನಡೆಸಿದ ಕ್ರಿಕೆಟಿಗ ಮತ್ತು ರಾಜಕಾರಣಿ ಗೌತಮ್ ಗಂಭೀರ್ ಮಾನವೀಯತೆ ಮೆರೆದಿದ್ದಾರೆ.
ಕಳೆದ 7 ವರ್ಷಳಿಂದ ಸರಸ್ವತಿ ಪತ್ರ ನವದೆಹಲಿಯ ಗಂಭೀರ್ ನಿವಾಸದಲ್ಲಿ ಕೆಲಸ ಮಾಡುತ್ತಿದ್ದರು, ಜೈಪುರ ನಿವಾಸಿಯಾದ ಆಕೆ ಮಧು ಮೇಹ ಮತ್ತು ರಕ್ತದೊತ್ತಡದಿಂದಾಗಿ ಏಪ್ರಿಲ್ 14 ರಂದು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಫಲಿಸದೇ ಏಪ್ರಿಲ್ 21ರಂದು ಸಾವನ್ನಪ್ಪಿದ್ದರು. ಈ ವಿಷಯವನ್ನು ಗಂಭೀರ್ ಆಕೆಯ ಸಹೋದರಿಗೆ ತಿಳಿಸಿದ್ದರು. ಆದರೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ದೆಹಲಿಗೆ ಬರಲಾಗಲಿಲ್ಲ ಎಂದು ಆಕೆಯ ಸಹೋದರಿ ಪ್ರಫುಲ್ಲಾ ಪತ್ರ ತಿಳಿಸಿದ್ದಾರೆ.
ದೆಹಲಿಯಿಂದ ಒಡಿಸ್ಸಾಗೆ ಶವ ತರಲು ಸಾಧ್ಯವಾಗದ ಕಾರಣ ನಾವು ಅಂತ್ಯ ಸಂಸ್ಕಾರವನ್ನು ಅಲ್ಲಿಯೇ ನೆರವೇರಿಸುವಂತೆ ಗಂಭೀರ್ ಅವರಲ್ಲಿ ಮನವಿ ಮಾಡಿಕೊಂಡೆವು ಇದಕ್ಕೆ ಸ್ಪಂದಿಸಿದ ಅವರು ಸರಸ್ವತಿ ಪತ್ರ ಅವರ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.
ಈ ಸಂಬಂಧ ಟ್ಟಿಟ್ಟರ್ ನಲ್ಲಿ ಬರೆದುಕೊಂಡಿರುವ ಗಂಭೀರ್ , ಅವರು ನಮ್ಮ ಮನೆಯ ಸದಸ್ಯರಲ್ಲಿ ಒಬ್ಬರಂತೆ ಇದ್ದರು. ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದರು, ಅವರ ಅಂತ್ಯ ಸಂಸ್ಕಾರ ನೆರವೇರಿಸುವುದು ನನ್ನ ಕರ್ತವ್ಯ ಎಂದು ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


