ಜೂ. 30ರವರೆಗೆ ಯಾವುದೇ ಸಾರ್ವಜನಿಕ ಸಭೆ, ಸಮಾರಂಭಕ್ಕೆ ಅವಕಾಶವಿಲ್ಲ: ಉತ್ತರ ಪ್ರದೇಶ ಸಿಎಂ
ಕೊರೋನಾವೈರಸ್ ಹಾವಳಿಯ ಕಾರಣ ಜೂನ್ 30 ರವರೆಗೆ ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಸಮಾರಂಭ, ಸಮಾವೇಶಗಳಿಗೆ ಅವಕಾಶ ನೀಡಬಾರದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಲಖನೌ: ಕೊರೋನಾವೈರಸ್ ಹಾವಳಿಯ ಕಾರಣ ಜೂನ್ 30 ರವರೆಗೆ ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಸಮಾರಂಭ, ಸಮಾವೇಶಗಳಿಗೆ ಅವಕಾಶ ನೀಡಬಾರದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
"ಜೂನ್ 30 ರವರೆಗೆ ಯಾವುದೇ ಸಾರ್ವಜನಿಕ ಕೂಟಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ಹೆಚ್ಚಿನ ನಿರ್ಧಾರ ತೆಗೆದುಕೊಳ್ಳಲಾಗುವುದು" ಸಿಎಂ ಯೋಗಿ ಆದಿತ್ಯನಾಥ್ ಕಚೇರಿ ಟ್ವೀಟ್ ಮಾಡಿದೆ.
ಕೋವಿಡ್ -19 ಪರಿಸ್ಥಿತಿ ಕುರಿತು ಸಿಎಂ ರಾಜ್ಯದ 11 ಸಮಿತಿಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಬಳಿಕ ಈ ತೀರ್ಮಾನ ತೆಗೆದುಕೊಂಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಉತ್ತರ ಪ್ರದೇಶದಲ್ಲಿ 1,621 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದುವರೆಗೆ 247 ರೋಗಿಗಳು ಗುಣಮುಖವಾಗಿದ್ದಾರೆ.ಒಟ್ಟಾರೆ 25 ಮಂದಿ ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


