ತಬ್ಲಿಘಿ ಸಭೆಗೆ ಹೋಗಿಬಂದವರ ಮಾಹಿತಿ ನೀಡಿದವರಿಗೆ 11 ಸಾವಿರ ರೂ. ಬಹುಮಾನ: ಬಿಜೆಪಿ ಸಂಸದ
ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡಲು ಕಾರಣವಾದ ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ ಹೋಗಿಬಂದವರ ಬಗ್ಗೆ ಮಾಹಿತಿ ನೀಡುವವರಿಗೆ 11 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಬಿಜೆಪಿ ಸಂಸದ ರವೀಂದ್ರ ಕುಶ್ವಾಹ ಅವರು ಘೋಷಿಸಿದ್ದಾರೆ.

ಲಖನೌ: ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡಲು ಕಾರಣವಾದ ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ ಹೋಗಿಬಂದವರ ಬಗ್ಗೆ ಮಾಹಿತಿ ನೀಡುವವರಿಗೆ 11 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಬಿಜೆಪಿ ಸಂಸದ ರವೀಂದ್ರ ಕುಶ್ವಾಹ ಅವರು ಘೋಷಿಸಿದ್ದಾರೆ.
ದೆಹಲಿಯ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರು ಅಥವಾ ವಿದೇಶದಿಂದ ವಾಪಸಾದ ಅನೇಕರು ಸಂಬಂಧಪಟ್ಟ ಅಧಿಕಾರಿಗಳಿಗೆ ತಮ್ಮ ಪ್ರಯಾಣದ ಮಾಹಿತಿ ನೀಡಿಲ್ಲ ಮತ್ತು ಕೊವಿಡ್-19 ಪರೀಕ್ಷೆಗೆ ಒಳಪಟ್ಟಿಲ್ಲ. ಹೀಗಾಗಿ ಅಂತಹವರ ಬಗ್ಗೆ ಮಾಹಿತಿ ನೀಡಿದರೆ 11 ಸಾವಿರ ರೂ. ಬಹುಮಾನ ನೀಡುವುದಾಗಿ ಉತ್ತರ ಪ್ರದೇಶದ ಸಲೇಂಪುರ್ ಸಂಸದ ಕುಶ್ವಾಹ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಬ್ಲಿಘಿ ಹೋಗಿಬಂದವರು ತಮ್ಮ ಪ್ರಯಾಣದ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಬೇಕು ಹಾಗೂ ಕೊರೋನಾ ಪರೀಕ್ಷೆಗೆ ಒಳಪಡಬೇಕು ಎಂದು ಸಂಸದರು ಹೇಳಿದ್ದಾರೆ. ಒಂದು ವೇಳೆ ಮಾಹಿತಿ ನೀಡದೇ ಇದ್ದಲ್ಲಿ ಅಂತಹವರ ಬಗ್ಗೆ ತಿಳಿಸುವವರಿಗೆ ನಗದು ಬಹುಮಾನ ನೀಡುವುದಾಗಿಯೂ ಹೇಳಿದ್ದಾರೆ.
ಕಳೆದ ಮಾರ್ಚ್ ನಲ್ಲಿ ದೆಹಲಿಯಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ಭಾಗವಹಿಸಿದ ಅನೇಕರಿಗೆ ಕೊರೋನಾ ವೈರಸ್ ಸೋಂಕು ತಗುಲಿತ್ತು. ದೇಶದ ನಾನಾ ಕಡೆಗಳಿಂದ ಜನ ಆ ಸಮಾವೇಶದಲ್ಲಿ ಭಾಗವಹಿಸಿದ್ದರು. ಪರಿಣಾಮವಾಗಿ ದೇಶದ ವಿವಿಧೆಡೆಗಳಿಗೆ ಸೋಂಕು ಹರಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


