ಬೋರ್ ಆಗ್ತಿದೆಯೆಂದು ಇಸ್ಪೀಟ್ ಆಡಿ 24 ಜನರಿಗೆ ಕೊರೋನಾ ಸೋಂಕು ಹರಡಿದ ಟ್ರಕ್ ಚಾಲಕ

ಅಮರಾವತಿ: ಲಾಕ್ ಡೌನ್ ಹಿನ್ನೆಲೆ ಬೋರ್ ಆಗಿದೆ ಎಂದು ಸ್ನೇಹಿತನನ್ನು ಸೂಟ್ ಕೇಸ್ ನಲ್ಲಿ ತಂದಿದ್ದ ವ್ಯಕ್ತಿಯ ಬಗ್ಗೆ ಓದಿದ್ದಿರಿ. ಈಗ ಅಂಥಹದ್ದೇ ಒಂದು ಪ್ರಕರಣ ಆಂಧ್ರಪ್ರದೇಶದಲ್ಲಿ ನಡೆದಿದ್ದು 24 ಜನರಿಗೆ ಕೊರೋನಾ ಸೋಂಕು ಹರಡಿದೆ.
ಆಂಧ್ರಪ್ರದೇಶದ ವಿಜಯವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಬೋರ್ ಆಗ್ತಿದೆ ಎಂಬ ಕಾರಣಕ್ಕಾಗಿ ನೆರೆಯವರು ಹಾಗೂ ಸ್ನೇಹಿತರೊಂದಿಗೆ ಇಸ್ಪೀಟ್ ಆಡಿದ ಟ್ರಕ್ ಚಾಲಕನೋರ್ವ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆತ ಪರಿಣಾಮ 24 ಜನರಿಗೆ ಕೊರೋನಾ ಸೋಂಕು ಹರಡಿದೆ.
ಇನ್ನು ಮತ್ತೊಂದು ಪ್ರಕರಣದಲ್ಲಿ ಮತ್ತೋರ್ವ ಟ್ರಕ್ ಚಾಲಕನೋರ್ವ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆತ ಪರಿಣಾಮ 15 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಎರಡು ಪ್ರತ್ಯೇಕ ಪ್ರಕರಣಗಳಿಂದ ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 40 ಕ್ಕೆ ಏರಿಕೆಯಾಗಿದೆ.
ವಿಜಯವಾಡ ಒಂದರಲ್ಲೇ ಈ ವರೆಗೂ 100 ಪ್ರಕರಣಗಳಿವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 25 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾಧಿಕಾರಿ ಇಮ್ತಿಯಾಜ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


