ಗಡಿಯಲ್ಲಿ ಪಾಕ್ ಮೂಲದ ಅಕ್ರಮ ನುಸುಳುಕೋರನ ಹೊಡೆದುರುಳಿಸಿದ ಭಾರತೀಯ ಸೇನೆ
ಭಾರತ ಮತ್ತು ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿ ಮೂಲಕ ಅಕ್ರಮವಾಗಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ನುಸುಳುಕೋರನ್ನು ಭಾರತೀಯ ಸೇನೆಯ ಸೈನಿಕರು ಭಾನುವಾರ ತಡರಾತ್ರಿ ಹೊಡೆದುರುಳಿಸಿದ್ದಾರೆ.

ಅಮೃತಸರ: ಭಾರತ ಮತ್ತು ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿ ಮೂಲಕ ಅಕ್ರಮವಾಗಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ನುಸುಳುಕೋರನ್ನು ಭಾರತೀಯ ಸೇನೆಯ ಸೈನಿಕರು ಭಾನುವಾರ ತಡರಾತ್ರಿ ಹೊಡೆದುರುಳಿಸಿದ್ದಾರೆ.
ಪಂಜಾಬ್ ನ ಅಮೃತಸರದ ಭಿಂಡಿ ಸೈದಾ ಗ್ರಾಮದ ಸಮೀಪದಲ್ಲಿ ಗಡಿಯಲ್ಲಿ ಅಕ್ರಮವಾಗಿ ಒಳ ನಸುಳುತ್ತಿದ್ದ ನುಸುಳಕೋರನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಬಿಎಸ್ ಎಫ್ ಸೈನಿಕರು ಕರ್ತವ್ಯದಲ್ಲಿದ್ದಾಗ ಓರ್ವ ವ್ಯಕ್ತಿ ಗಡಿಯೊಳಗೆ ನುಸುಳುತ್ತಿದ್ದ. ಇದನ್ನು ಗಮನಿಸಿದ ಸೈನಿಕರು ಸತತವಾಗಿ ಎಚ್ಚರಿಕೆ ನೀಡುತ್ತಿದ್ದರೂ ಆತ ಸೈನಿಕರ ಮಾತನ್ನು ಕಿವಿಗೆ ಹಾಕಿಕೊಳ್ಳದೇ ತನ್ನ ಕಾರ್ಯ ಮುಂದುವರೆಸಿದ್ದ. ಹೀಗಾಗಿ ಅನ್ಯಮಾರ್ಗವಿಲ್ಲದೇ ಸೈನಿಕರು ಬಂದೂಕಿನ ಮೂಲಕ ಗುಂಡು ಹಾರಿಸಿದರು. ಈ ವೇಳೆ ಆತ ಗುಂಡೇಟಿನಿಂದಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ ಎಂದು ಸೇನಾಮೂಲಗಳ ತಿಳಿಸಿವೆ.
ಬಳಿಕ ಮೃತದೇಹವನ್ನು ಸೈನಿಕರು ಸುತ್ತುವರೆದಿದ್ದು, ಈ ವೇಳೆ ಆತನ ಬಳಿ ಯಾವುದೇ ರೀತಿಯ ಶಸ್ತ್ರಾಸ್ತ್ರ, ಮದ್ದು-ಗುಂಡುಗಳು, ಇತರೆ ಶಂಕಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


