ಕೋವಿಡ್-19 ಸೋಂಕು ಕೊಯಂಬತ್ತೂರಿನ ಎರಡು ಪೋಲೀಸ್ ಠಾಣೆಗಳೇ ಬಂದ್!
6 ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಎರಡು ಪೊಲೀಸ್ ಠಾಣೆಗಳನ್ನೇ ಬಂದ್ ಮಾಡಲಾಗಿದೆ.

ಕೊಯಂಬತ್ತೂರ್: 6 ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಎರಡು ಪೊಲೀಸ್ ಠಾಣೆಗಳನ್ನೇ ಬಂದ್ ಮಾಡಲಾಗಿದೆ.
ಚೆನ್ನೈ ನ ಪೊದನೂರ್ ಹಾಗೂ ಕುನಿಯಮುತೂರ್ ನ ಎರಡು ಪೊಲೀಸ್ ಠಾಣೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಕೊರೋನಾ ಸೋಂಕು ದೃಢಪಟ್ಟಿರುವ ಪೊಲೀಸ್ ಸಿಬ್ಬಂದಿಗಳಿಗೆ ಇಎಸ್ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ಅವರನ್ನು ಖಾಸಗಿ ಕಲ್ಯಾಣ ಮಂಟಪಗಳಿಗೆ ಸ್ಥಳಾಂತರಿಸಿ ಅಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಈ ಆರು ಮಂದಿಯ ಜೊತೆ ಸಂಪರ್ಕದಲ್ಲಿದ್ದ 105 ಪೊಲೀಸ್ ಸಿಬ್ಬಂದಿಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಕೊರೋನಾ ಸೋಂಕು ಕಂಡುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


