ದೇಶ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾಗೆ 48 ಸಾವು; ಒಟ್ಟು 872 ಬಲಿ; 28 ಸಾವಿರದ ಗಡಿ ಸಮೀಪಿಸಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,396 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ 27,982ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾಗೆ 48 ಸಾವು; ಒಟ್ಟು 872 ಬಲಿ; 28 ಸಾವಿರದ ಗಡಿ ಸಮೀಪಿಸಿದ ಸೋಂಕಿತರ ಸಂಖ್ಯೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,396 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ 27,982ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

24 ಗಂಟೆಗಳಲ್ಲಿ ದೇಶಾದ್ಯಂತ ಒಟ್ಟು 48 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ  ಹೀಗಾಗಿ ಕೊರೋನಾಗೆ ಬಲಿಯಾದವರ ಸಂಖ್ಯೆ 872 ಕ್ಕೇರಿದೆ ಎಂದು ಇಂದು ಬೆಳಗ್ಗೆ ಕೇಂದ್ರ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ತಿಳಿಸಿದೆ.

ಇನ್ನು, ದೆಹಲಿಯ ಆಸ್ಪತ್ರೆಗಳಲ್ಲೇ ಕೊರೋನಾ ಸೋಂಕಿನ ಅಬ್ಬರ ಜೋರಾಗಿದೆ. ನಿನ್ನೆ ಒಂದೇ ದಿನ ಆರೋಗ್ಯ ಸೇವೆಯ 51 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೆಹಲಿಯ ರೋಹಿಣಿಯ ಅಂಬೇಡ್ಕರ್ ಆಸ್ಪತ್ರೆಯಲ್ಲಿ 32 ಜನ, ಜಗಜೀವನರಾಮ್ ಆಸ್ಪತ್ರೆಯಲ್ಲಿ 19 ನರ್ಸ್​​ಗಳು, ಎಮ್ಸ್ ಆಸ್ಪತ್ರೆಯ ನರ್ಸ್ ಮತ್ತು ಅವರ ಇಬ್ಬರು ಮಕ್ಕಳಲ್ಲಿ ಕೊರೋನಾ ಕಾಣಿಸಿಕೊಂಡಿದೆ. ಇನ್ನು, ಅಂಬೇಡ್ಕರ್ ಆಸ್ಪತ್ರೆಯಲ್ಲಿ ಕೊರೋನಾ ಪೀಡಿತ ಗರ್ಭಿಣಿ ಮೃತಪಟ್ಟಿದ್ದಾರೆ.

ಒಂದು ತಿಂಗಳ ಕಾಲ ದೇಶವನ್ನೇ ಲಾಕ್​ಡೌನ್​ ಮಾಡಿದ ಹೊರತಾಗಿಯೂ ಕೊರೋನಾ ವೈರಸ್​ ನಿಯಂತ್ರಣಕ್ಕೆ ಬರುತ್ತಿಲ್ಲ. ಇದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.