ಅಮೃತಸರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಾರ್ಯಕರ್ತನ ಬಂಧನ: ಪಂಜಾಬ್ ಡಿಜಿಪಿ
ಹಿಜ್ಬುಲ್ ಮುಜಾಹಿದ್ದೀನ್ ಕಾರ್ಯಕರ್ತನನ್ನು ಬಂಧಿಸಿರುವ ಪಂಜಾಬ್ ಪೊಲೀಸರು ಆತನಿಂದ 29 ಲಕ್ಷ ರು ಹಣ ವಶಕ್ಕೆ ಪಡೆದಿದ್ದಾರೆ.

ಅಮೃತಸರ: ಹಿಜ್ಬುಲ್ ಮುಜಾಹಿದ್ದೀನ್ ಕಾರ್ಯಕರ್ತನನ್ನು ಬಂಧಿಸಿರುವ ಪಂಜಾಬ್ ಪೊಲೀಸರು ಆತನಿಂದ 29 ಲಕ್ಷ ರು ಹಣ ವಶಕ್ಕೆ ಪಡೆದಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಕಾರ್ಯಕರ್ಕ ಹಿಮಾಲ್ ಅಹ್ಮದ್ ವಾಗೆ ಎಂಬುವನನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಡಿಜಿಪಿ ದಿನಕರ್ ಗುಪ್ತಾ ಭಾನುವಾರ ಹೇಳಿದ್ದಾರೆ.
ಈತ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನೌಗಂ ನವನಾಗಿದ್ದಾನೆ. ಏಪ್ರಿಲ್ 25 ರಂದು ಗಸ್ತು ತಿರುಗತ್ತಿದ್ದ ಪೊಲೀಸರು ಆತನನ್ನು ಅಮೃತಸರದಲ್ಲಿ ಬಂಧಿಸಿದ್ದು ಆತನ ವಿರುದ್ದ ಕೇಸ್ ದಾಖಲಿಸಿಲಾಗಿದೆ.
ಮೆಟ್ರೋ ಮಾರ್ಟ್ ಬಳಿ ಅಪರಿಚಿತ ವ್ಯಕ್ತಿಯಿಂದ ಹಣ ಸಂಗ್ರಹಿಸಿಕೊಂಡು ತನ್ನ ಲಾರಿಯಲ್ಲಿ ಇರಿಸಿಕೊಳ್ಳುತ್ತಿದ್ದ ವೇಳೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


