ದೇಶ

ಮೇ.21 ರವರೆಗೆ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರಿಕೆ: ಮಮತಾ ಬ್ಯಾನರ್ಜಿ

ಮುಂಬರುವ ಮೇ 21ರವರೆಗೂ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರಿಕೆಯಾಗಲಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮೇ.21 ರವರೆಗೆ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರಿಕೆ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Published On :

ಕೋಲ್ಕತಾ: ಮುಂಬರುವ ಮೇ 21ರವರೆಗೂ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರಿಕೆಯಾಗಲಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮಾರಣಾಂತಿಕ ಕೊರೊನಾ ವೈರಸ್‌ ವಿರುದ್ಧ ಹೋರಾಡಲು ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸಲಾದ ನಿರ್ಬಂಧಗಳನ್ನು ಮೇ 21 ರವರೆಗೆ ಮುಂದುವರಿಸಲಾಗುವುದು. ಈ ಸಮಯದಲ್ಲಿ ನಾವು ಅತ್ಯಂತ ಜಾಗೃಕರಾಗಿರಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ  ಬ್ಯಾನರ್ಜಿ ತಿಳಿಸಿದ್ದಾರೆ.

ಇದರ ನಡುವೆ ಪ್ರಸ್ತುತ ಇರುವ ಲಾಕ್‌ಡೌನ್‌ ಅನ್ನು ಮುಂದುವರಿಸುವ ಕುರಿತಂತೆ ಸ್ಪಷ್ಟನೆ ನೀಡದ ಬಂಗಾಳ ಸಿಎಂ, ಲಾಕ್‌ಡೌನ್‌ ವಿಸ್ತರಣೆ ಮಾಡುವುದು ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ. "ನಾವು ತೆಗೆದುಕೊಳ್ಳುತ್ತಿರುವ ನಿರ್ಬಂಧಗಳು ಲಾಕ್‌  ಡೌನ್‌ಗಿಂತವಿಭಿನ್ನವಾಗಿರಲಿದೆ.. ರೆಡ್‌ ಝೋನ್ ( ಹೆಚ್ಚು ಕೊರೋನಾ ವೈರಸ್‌ ಪ್ರಕರಣಗಳು ದಾಖಲಾಗಿರುವ ಪ್ರದೇಶ) ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಆರೆಂಜ್‌ ಝೋನ್‌ (ಕನಿಷ್ಠ ಪ್ರಕರಣಗಳು ದಾಖಲಾಗಿರುವ ಪ್ರದೇಶ)ನಲ್ಲಿ ಕೊಂಚ  ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು. ಈ ಭಾಗದಲ್ಲಿ ನಿರ್ಬಂಧಿತ ಚಟುವಟಿಕೆಗಳಿಗೆ ಅವಕಾಶ ನೀಡಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕನಿಷ್ಠ ಕೊರೋನಾ ವೈರಸ್‌ಗಳು ದಾಖಲಾಗುತ್ತಿರುವ ಆರೆಂಜ್‌ ಝೋನ್‌ ರೆಡ್‌ ಝೋನ್‌ ಆಗುವ ಸಂಭವವಿರುತ್ತದೆ. ಈ ನಿಟ್ಟಿನಲ್ಲಿ ಈ ವಲಯದಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗುವುದು. ಗ್ರೀನ್‌ ಝೋನ್‌ನಲ್ಲಿ ಹೆಚ್ಚಿನ ವಿನಾಯಿತಿ ನೀಡಲಾಗುವುದು. ಆದರೆ, ಕಿತ್ತಳೆ ಅಥವಾ ಕೆಂಪು  ವಲಯ ವಿಭಾಗಗಳ ಅಡಿಯಲ್ಲಿ ಹೆಚ್ಚು ಪಾಸಿಟಿವ್‌ ಪ್ರಕರಣಗಳು ಪತ್ತೆಯಾದರೆ, ಈ ಪ್ರದೇಶಗಳನ್ನು ಕಠಿಣ ನಿರ್ಬಂಧಗಳಿಗೆ ಒಳಪಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.