ಛತ್ತೀಸ್ಗಢದಲ್ಲಿ ಎನ್'ಕೌಂಟರ್: ಓರ್ವ ನಕ್ಸಲ್ ಹತ, 2 ಯೋಧರಿಗೆ ಗಾಯ
ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಓರ್ವ ಮಾವೋವಾದಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ನಾರಾಯಣಪುರ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಓರ್ವ ಮಾವೋವಾದಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ನಾರಾಯಣಪುರದ ಛೋಟೆ ಡೊಂಗರ್ ಪೊಲೀಸ್ ಠಾಣೆಯ ಕರೆಮೆಟ್ಟಾ ಎಂಬ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಎನ್'ಕೌಂಟರ್ ನಡೆದಿದೆ. ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲು ಐಇಡಿ ಸ್ಫೋಟಿಸಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹತ್ಯೆಯಾಗಿರುವ ನಕ್ಸಲ್ ಮಹಿಳೆಯ ಮೃತದೇಹದ ಜೊತೆಗೆ 1 ಎಸ್ಎಲ್ಆರ್ ರೈಫಲ್, 12 ಬೋರ್ ರೈಫಲ್ಸ್ ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಗಾಯಗೊಂಡಿರುವ ಇಬ್ಬರು ಯೋಧರನ್ನು ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದ್ದು, ಇದೀಗ ಆವರ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


