ಕೊರೋನಾ ಲಾಕ್ ಡೌನ್ ಮಧ್ಯೆ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ಕೊರೋನಾ ಮಹಾಮಾರಿಯಿಂದಾಗಿ ದೇಶದಲ್ಲಿ ಸಾವು ನೋವುಗಳು ಸಂಭವಿಸುತ್ತಿದೆ. ಇದರ ಮಧ್ಯೆ ಮಹಿಳೆಯೊಬ್ಬರು ಐದು ಮಕ್ಕಳಿಗೆ ಜನ್ಮ ನೀಡಿ ಮಹಾತಾಯಿ ಎನಿಸಿಕೊಂಡಿದ್ದಾರೆ.

ಲಖನೌ: ಕೊರೋನಾ ಮಹಾಮಾರಿಯಿಂದಾಗಿ ದೇಶದಲ್ಲಿ ಸಾವು ನೋವುಗಳು ಸಂಭವಿಸುತ್ತಿದೆ. ಇದರ ಮಧ್ಯೆ ಮಹಿಳೆಯೊಬ್ಬರು ಐದು ಮಕ್ಕಳಿಗೆ ಜನ್ಮ ನೀಡಿ ಮಹಾತಾಯಿ ಎನಿಸಿಕೊಂಡಿದ್ದಾರೆ.
ಉತ್ತರಪ್ರದೇಶದ ಬರಬಂಕಿಸ್ ಕಮ್ಯೂನಿಟಿ ಹೆಲ್ತ್ ಸೆಂಟರ್ ನಲ್ಲಿ ಕುತ್ಲೂಪೂರ್ ನಿವಾಸಿ ಕುಂದನ್ ಪತ್ನಿ ಅನಿತಾ ಐವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಐವರಲ್ಲಿ ಎರಡು ಗಂಡು ಮತ್ತು ಮೂವರು ಹೆಣ್ಣು ಮಕ್ಕಳು.
ಸಿಎಚ್ ಸಿ ಆಸ್ಪತ್ರೆಯ ನರ್ಸ್ ಗಳ ಪ್ರಕಾರ, ಅನಿತಾ ಅವರಿಗೆ ಇದು ಎರಡನೇ ಹೆರಿಗೆಯಾಗಿದೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಐದು ಮಕ್ಕಳಿಗೆ ಅನಿತಾ ಜನ್ಮ ನೀಡಿದ್ದಾರೆ.
ಇನ್ನು ಐವರ ಪೈಕಿ ಎರಡು ಶಿಶುಗಳ ತೂಕ 1.2 ಕೆಜಿ ಇದ್ದು ಇನ್ನೆರೆಡು ಶಿಶುಗಳ ತೂಕ 900 ಗ್ರಾಂ ಆಗಿದೆ. ಇನ್ನು ಐದನೇ ಮಗುವಿನ ತೂಕ 800 ಗ್ರಾಂ ಇದೆ. ಐದು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


