ದೇಶ

ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಭಾರತಕ್ಕೆ ಮತ್ತೆ 3 ಮಿಲಿಯನ್ ಡಾಲರ್ ನೆರವು ಘೋಷಿಸಿದ ಅಮೆರಿಕ

ಭಾರತದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡವುದಕ್ಕಾಗಿ ಅಮೆರಿಕ ಸರ್ಕಾರ ಮತ್ತೆ ಹೆಚ್ಚುವರಿಯಾಗಿ ಮೂರು ಮಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ನೆರವಿನ ಪ್ಯಾಕೇಜ್ ನ್ನು ಘೋಷಿಸಿದೆ.

ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಭಾರತಕ್ಕೆ ಮತ್ತೆ 3 ಮಿಲಿಯನ್ ಡಾಲರ್ ನೆರವು ಘೋಷಿಸಿದ ಅಮೆರಿಕ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಭಾರತದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡವುದಕ್ಕಾಗಿ ಅಮೆರಿಕ ಸರ್ಕಾರ ಮತ್ತೆ ಹೆಚ್ಚುವರಿಯಾಗಿ ಮೂರು ಮಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ನೆರವಿನ ಪ್ಯಾಕೇಜ್ ನ್ನು ಘೋಷಿಸಿದೆ.

ಕಳೆದ ಏಪ್ರಿಲ್ 6ರಂದು ಕೊವಿಡ್ -19 ವಿರುದ್ಧದ  ಹೋರಾಟಕ್ಕಾಗಿ ಭಾರತಕ್ಕೆ ಅಂತಾರಾಷ್ಟ್ರೀಯ ಅಭಿವೃದ್ಧಿಗಾಗಿ ಇರುವ ಅಮೆರಿಕಾ ಏಜೆನ್ಸಿ ಯುಎಸ್ ಎಐಡಿ ಮೂಲಕ 2. 9 ಬಿಲಿಯನ್ ಡಾಲರ್ ಮೊತ್ತದ ನೆರವು ಘೋಷಿಸಿತ್ತು.

ಕೊವಿಡ್-19 ನಿಯಂತ್ರಿಸಲು ಭಾರತಕ್ಕೆ ಹೆಚ್ಚುವರಿಯಾಗಿ 3 ಮಿಲಿಯನ್ ಡಾಲರ್ ನೆರವು ನೀಡಲಾಗಿದೆ ಎಂದು ಭಾರತದಲ್ಲಿರುವ ಅಮೆರಿಕ ರಾಯಭಾರಿ ಕೆನ್ನೆತ್ ಜಸ್ಟರ್ ಅವರು ಹೇಳಿದ್ದಾರೆ.

ಕೊವಿಡ್-19 ವಿರುದ್ಧದ ನಿರಂತರ ಪ್ರಯತ್ನಗಳಲ್ಲಿ ಭಾರತವನ್ನು ಬೆಂಬಲಿಸುವ ಈ ಹೆಚ್ಚುವರಿ ನೆರವು ಅಮೆರಿಕ ಮತ್ತು ಭಾರತದ ನಡುವಿನ ಬಲವಾದ ಮತ್ತು ನಿರಂತರ ಪಾಲುದಾರಿಕೆಯ ಮತ್ತೊಂದು ಉದಾಹರಣೆಯಾಗಿದೆ ಎಂದು ಅಮೆರಿಕ ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ನಿಧಿಯಿಂದ ಕೊವಿಡ್-19 ಸೋಂಕು ಹರಡದಂತೆ ತಡೆಗಟ್ಟಲು ಭಾರತಕ್ಕೆ ನೆರವಾಗಲಿದೆ. ಸೋಂಕು ಪೀಡಿತರಿಗೆ ಚಿಕಿತ್ಸೆ ಒದಗಿಸಲು ಮತ್ತು ರೋಗ ನಿಯಂತ್ರಣ ನಿಟ್ಟಿನಲ್ಲಿ ಅಗತ್ಯ ಸಾಧನ ಸಲಕರಣೆಗಳ ಪೂರೈಕೆಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.