ವಿಶಾಖಪಟ್ಟಣಂನಲ್ಲಿ ಕ್ರೇನ್ ದುರಂತ: 11 ಮಂದಿ ಸಾವು!
ಈ ಹಿಂದೆ ವಿಷಾನಿಲ ಸೋರಿಕೆ ಪ್ರಕರಣದಿಂದ ಸುದ್ದಿಯಾಗಿದ್ದ ವಿಶಾಖಪಟ್ಟಣಂನಲ್ಲಿ ಮತ್ತೊಂದು ಪ್ರಮಾದ ಘಟಿಸಿದ್ದು, ಕ್ರೇನ್ ಕುಸಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಶಾಖಪಟ್ಟಣಂ: ಈ ಹಿಂದೆ ವಿಷಾನಿಲ ಸೋರಿಕೆ ಪ್ರಕರಣದಿಂದ ಸುದ್ದಿಯಾಗಿದ್ದ ವಿಶಾಖಪಟ್ಟಣಂನಲ್ಲಿ ಮತ್ತೊಂದು ಪ್ರಮಾದ ಘಟಿಸಿದ್ದು, ಕ್ರೇನ್ ಕುಸಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ವಿಶಾಖಪಟ್ಟಣಂನ ಹಿಂದೂಸ್ತಾನ್ ಷಿಪ್ ಯಾರ್ಡ್ ಲಿಮಿಟೆಡ್ ಘಟಕದಲ್ಲಿ ಈ ದುರಂತ ಸಂಭವಿಸಿದ್ದು, ಈ ವೇಳೆ ಅಲ್ಲಿದ್ದ 11 ಮಂದಿ ಸಾವನ್ನಪ್ಪಿದ್ದಾರೆ. ದಿನ ನಿತ್ಯದಂತೆಯೇ ಇಂದೂ ಕೂಡ ಶಿಪ್ ಯಾರ್ಡ್ ನಲ್ಲಿ ಲೋಡ್ ಅನ್ ಲೋಡ್ ಕಾರ್ಯ ನಡೆಯುತ್ತಿದ್ದಾಗ ಇದ್ದಕಿದ್ದ ಹಾಗೆ ಕ್ರೇನ್ ಕುಸಿದು ಬಿದ್ದಿದೆ. ಈ ವೇಳೆ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಕ್ರೇನ್ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ಜಾರೆ. ಪ್ರಸ್ತುತ ಕ್ರೇನ್ ಅವಶೇಷಗಳನ್ನು ತೆರವುಗೊಳಿಸಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ.
ಇನ್ನು ದುರಂತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಡಿಸಿಪಿ ಸುರೇಶ್ ಬಾಬು ಅವರು ತನಿಖೆ ನಡೆಸವುದಾಗಿ ಹೇಳಿದ್ದಾರೆ.
ಇತ್ತೀಚೆಗಷ್ಟೇ ಇದೇ ವಿಶಾಖಪಟ್ಟಣಂನಲ್ಲಿ ಎಲ್ ಜಿ ಪಾಲಿಮರ್ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ಮತ್ತು ಗ್ಯಾಸ್ ಟ್ಯಾಂಕ್ ಸ್ಫೋಟ ಪ್ರಕರಣಗಳಲ್ಲಿ ಹಲವರು ಸಾವನ್ನಪ್ಪಿದ್ದರು. ಈ ಘಟನೆಗಳು ಹಸಿರಾಗಿರುವಂತೆಯೇ ಮತ್ತೊಂದು ದುರಂತ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


