ಲಿಪುಲೇಖ್ ಗಡಿಯಲ್ಲಿ ಚೈನಾದಿಂದ ಸೇನೆ ಜಮಾವಣೆ
ಚೈನಾ ತನ್ನ ನರಿ ಬುದ್ಧಿಯನ್ನು ಮತ್ತೆ ಪ್ರದರ್ಶಿಸಿದೆ. ಲಡಾಖ್ ಬಳಿಯಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಲೇ ಮತ್ತೊಂದು ಕಡೆ ಉತ್ತರಾಖಂಡದ ಲಿಪುಲೇಖ್ ಬಳಿ ಭಾರಿ ಪ್ರಮಾಣದಲ್ಲಿ ಸೇನೆಯನ್ನು ಜಮಾವಣೆ ಮಾಡುತ್ತಿದೆ.

ನವದೆಹಲಿ: ಚೈನಾ ತನ್ನ ನರಿ ಬುದ್ಧಿಯನ್ನು ಮತ್ತೆ ಪ್ರದರ್ಶಿಸಿದೆ. ಲಡಾಖ್ ಬಳಿಯಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಲೇ ಮತ್ತೊಂದು ಕಡೆ ಉತ್ತರಾಖಂಡದ ಲಿಪುಲೇಖ್ ಬಳಿ ಭಾರಿ ಪ್ರಮಾಣದಲ್ಲಿ ಸೇನೆಯನ್ನು ಜಮಾವಣೆ ಮಾಡುತ್ತಿದೆ.
ಸುಮಾರು ಮೂರು ತಿಂಗಳಿಂದ ಲಡಾಖ್ ಗಡಿಯ ಬಳಿ ಭಾರತ-ಚೈನಾ ನಡುವೆ ಉದ್ರಿಕ್ತ ಪರಿಸ್ಥಿತಿ ನಿರ್ಮಾಣಗೊಂಡಿದೆ. ಬಿಗುವಿನ ಪರಿಸ್ಥಿತಿ ತಗ್ಗಿಸಲು ಉಭಯ ದೇಶಗಳ ನಡುವೆ ಉನ್ನತ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ.
ಚರ್ಚೆಯ ಫಲವಾಗಿ ತನ್ನ ಸೇನೆಗಳನ್ನು ಹಿಂದಕ್ಕೆ ಕರೆಸಿಕೊಳಳುವುದಾಗಿ ಚೈನಾ ಪ್ರಕಟಿಸಿದೆ. ಆದರೆ, ಈ ಹೇಳಿಕೆ ನೀಡಿ ಹಲವು ದಿನಗಳು ಕಳೆಯುವ ಮುನ್ನವೇ ತನ್ನ ವಕ್ರ ಬುದ್ದಿಯನ್ನು ತೋರಿಸಿದೆ. ಲಿಪುಲೇಖ್, ಅರುಣಾಚಲ ಪ್ರದೇಶ, ಸಿಕ್ಕಿಂನ ಉತ್ತರ ಪ್ರದೇಶಲ್ಲಿರುವ ಭಾರತ ಗಡಿಯಲ್ಲಿ ಭಾರಿ ಪ್ರಮಾಣದಲ್ಲಿ ತನ್ನ ಸೇನೆಯ ಜಮಾವಣೆ ಆರಂಭಿಸಿದೆ ಎಂದು ಭಾರತದ ಉನ್ನತ ಸೇನಾದಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಭಾರತ ಕೂಡಾ ತನ್ನ ಸೇನಾ ಪಡೆಗಳನ್ನೂ ಅಲ್ಲಿಗೆ ರವಾನಿಸಲಾಗುತ್ತಿದೆ. ಚೈನಾ, ನೇಪಾಳ್ ವಿರುದ್ದವೂ ದೃಷ್ಟಿ ಹರಿಸಿದೆ ಎಂದು ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


