ಗಿನ್ನಿಸ್ ವಿಶ್ವ ದಾಖಲೆ ಪುಸ್ತಕ ಸೇರಿದ 'ಮಾನವ ಕಂಪ್ಯೂಟರ್' ಶಕುಂತಲಾ ದೇವಿ
ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಗುರುವಾರ "ಮಾನವ ಕಂಪ್ಯೂಟರ್" ಶಕುಂತಲಾ ದೇವಿ ಅವರಿಗೆ ಗಿನ್ನಿಸ್ ದಾಖಲೆಯ ಪ್ರಮಾಣಪತ್ರವನ್ನು ಮರಣೋತ್ತರವಾಗಿ ನೀಡಿದೆ.

ನವದೆಹಲಿ: ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಗುರುವಾರ "ಮಾನವ ಕಂಪ್ಯೂಟರ್" ಶಕುಂತಲಾ ದೇವಿ ಅವರಿಗೆ ಗಿನ್ನಿಸ್ ದಾಖಲೆಯ ಪ್ರಮಾಣಪತ್ರವನ್ನು ಮರಣೋತ್ತರವಾಗಿ ನೀಡಿದೆ.
ಶಕುಂತಲಾ ದೇವಿ ಲಂಡನ್ ಇಂಪೀರಿಯಲ್ ಕಾಲೇಜಿನಲ್ಲಿ ಓದುತ್ತಿದ್ದ ವೇಳೆ (1980 ಜೂನ್ 18)13 ಅಂಕಿಗಳ ಎರಡು ಸಂಖ್ಯೆಯನ್ನು ಗುಣಿಸಿ 28 ಸೆಕೆಂಡ್ ಗಳಲ್ಲಿ ಉತ್ತರಿಸುವ ಮೂಲಕ ದಾಖಲೆ ಬರೆದಿದ್ದರು.
ಇದೀಗ ಈ ಸಾಧನೆಗೆ ಶಕುಂತಲಾ ದೇವಿಯವರಿಗೆ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಪ್ರಮಾಣಪತ್ರ ನೀಡಿದ್ದು ದಿವಂಗತ ಗಣಿತಜ್ಞ ರ ಪುತ್ರಿ ಅನುಪಮಾ ಬ್ಯಾನರ್ಜಿ ಈ ಪ್ರಮಾಣಪತ್ರವನ್ನು ಸ್ವೀಕರಿಸಿದ್ದಾರೆ.
"ನಾನು ಹೋದಲ್ಲೆಲ್ಲಾ, ಎಲ್ಲ ಜನರು ಆ ದಾಖಲೆಯ ಬಗ್ಗೆ ಮಾತನಾಡುತ್ತಿದ್ದರು. ಹಾಗಾಗಿ ಇದು ವಿಶ್ವದ ಅತಿದೊಡ್ಡ ಸಾಧನೆ ಎಂದು ನನಗೆ ತಿಳಿದಿತ್ತು. ಅದೊಂದು ಅದ್ಭುತ!" ಅನುಪಮಾ ಪಿಟಿಐಗೆ ತಿಳಿಸಿದ್ದಾರೆ.
ಶಕುಂತಲಾ ದೇವಿ ಜೀವನಾಧಾರಿತ ಅದೇ ಹೆಸರಿನ ಚಿತ್ರ ಶುಕ್ರವಾರ ಒಟಿಟಿ ಮೂಲಕ ವಿಶ್ವಾದ್ಯಂತ ತೆರೆಕಂಡಿದೆ. ಈ ಚಿತ್ರದಲ್ಲಿ ವಿದ್ಯಾ ಬಾಲನ್ ಶಕುಂತಲಾ ದೇವಿಯವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನು ಮೆನನ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


