ಕಾಂಗ್ರೆಸ್ ನಾಯಕ, ಶಾಸಕ ಪಿಸಿ ಶರ್ಮಾಗೆ ಕೊರೋನಾ ಪಾಸಿಟಿವ್!
ಕಾಂಗ್ರೆಸ್ ನಾಯಕ ಹಾಗೂ ಶಾಸಕ ಪಿಸಿ ಶರ್ಮಾ ಅವರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಶಾಸಕ ಪಿಸಿ ಶರ್ಮಾ ಅವರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಈ ಕುರಿತು ಸ್ವತಃ ಪಿಸಿ ಶರ್ಮಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ವೈದ್ಯಕೀಯ ವರದಿಯಿಂದ ನನಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ನಾನು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
ವೈದ್ಯಕೀಯ ಚಿಕಿತ್ಸೆಗಾಗಿ ಚಿರಾಯು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕೊರೋನಾ ಪಾಸಿಟಿವ್ ಇದ್ದರೂ ಆರೋಗ್ಯವಾಗಿದ್ದೇನೆ. ನನ್ನನ್ನು ಭೇಟಿಯಾಗಿದ್ದವರು ಪರೀಕ್ಷೆಗೊಳಗಾಗುವಂತೆ ಹಾಗೂ ಕ್ವಾರಂಟೈನ್'ಗೊಳಗಾಗುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


