ಕೋವಿಡ್-19: ದೇಶದಲ್ಲಿ ಒಂದೇ ದಿನ 52,972 ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 18 ಲಕ್ಷ, 38,135 ಮಂದಿ ಸಾವು
ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,972 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,972 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ಇನ್ನು ನಿನ್ನೆ ಒಂದೇ ದಿನ 771 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 38,135ಕ್ಕೆ ಏರಿಕೆಯಾಗಿದೆ.
ಒಂದೇ ದಿನ 52,972 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 18,03,696 ಕ್ಕೆ ಏರಿಕೆಯಾಗಿದೆ. 18,03,696 ಮಂದಿ ಸೋಂಕಿತರ ಪೈಕಿ 1,186,203 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನೂ 5,79,357 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಇನ್ನು ರಾಜ್ಯವಾರು ನಿನ್ನೆ ಆಂಧ್ರಪ್ರದೇಶದಲ್ಲಿ 8555 ಸೋಂಕು 64 ಸಾವು, ಮಹಾರಾಷ್ಟ್ರದಲ್ಲಿ 9509 ಸೋಂಕು, 260 ಸಾವು, ತಮಿಳುನಾಡಲ್ಲಿ 5875 ಸೋಂಕು 92 ಸಾವು, ಉತ್ತರಪ್ರದೇಶದಲ್ಲಿ 3873 ಸೋಂಕು 53 ಸಾವು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


