ನೆನಪಿನಶಕ್ತಿ ಕಳೆದುಕೊಂಡ 75 ವರ್ಷದ ವೃದ್ಧೆ ಮೇಲೆ ಅತ್ಯಾಚಾರ!
ನೆನಪಿನಶಕ್ತಿ ಕಳೆದುಕೊಂಡ ಸುಮಾರು 75 ವರ್ಷ ವಯಸ್ಸಿನ ವೃದ್ಧೆ ಮೇಲೆ ಕಾಮುಕನೋರ್ವ ಅತ್ಯಾಚಾರ ನಡೆಸಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ.

ಕೊಚ್ಚಿ: ನೆನಪಿನಶಕ್ತಿ ಕಳೆದುಕೊಂಡ ಸುಮಾರು 75 ವರ್ಷ ವಯಸ್ಸಿನ ವೃದ್ಧೆ ಮೇಲೆ ಕಾಮುಕನೋರ್ವ ಅತ್ಯಾಚಾರ ನಡೆಸಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ.
ಕೇರಳದ ಕೋಲೆಂಚೆರಿ ಸಮೀಪದ ಪ್ಯಾಂಗೋಡ್ ಎಂಬ ಗ್ರಾಮದಲ್ಲಿ ಪರಿಚಿತರ ಮನೆಗೆ ಬಂದಿದ್ದಾಗ ವೃದ್ಧೆಯ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಖಾಸಗಿ ವೈದ್ಯಕೀಯ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಲಾಗಿದೆ. ಆಕೆಗೆ ಚಿಕಿತ್ಸೆ ಕೊಡುತ್ತಿರುವ ವೈದ್ಯರು ಕೂಡ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದನ್ನು ಖಚಿತಪಡಿಸಿದ್ದಾರೆ.
ಎರಡು ಮಕ್ಕಳು ಮತ್ತು ಮೊಮ್ಮಕ್ಕಳನ್ನು ಹೊಂದಿರುವ ಈ ವೃದ್ಧೆ ಭಾನುವಾರ ತನ್ನ ಗ್ರಾಮದಲ್ಲಿರುವ ಪರಿಚಿತರ ಮನೆಗೆ ಬಂದಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಮೂಲಗಳು ತಿಳಿಸಿರುವಂತೆ ವೃದ್ಧೆಗೆ ನೆನಪಿನ ಶಕ್ತಿ ಕ್ಷೀಣಿಸಿದೆ. ತನ್ನ ಮೇಲೆ ಅತ್ಯಾಚಾರ ಎಸಗಿದವನ ಬಗ್ಗೆ ಕ್ಷಣಕ್ಕೊಂದು ಮಾಹಿತಿ ಕೊಡುತ್ತಿದ್ದಾರೆ. ಹಾಗಾಗಿ, ನಿಜವಾದ ಆರೋಪಿಯನ್ನು ಬಂಧಿಸಲು ಕಷ್ಟವಾಗುತ್ತಿದೆ. ಆದರೂ ಶಂಕೆಯ ಮೇರೆಗೆ ಒಂದಷ್ಟ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


