ಮಹಾರಾಷ್ಟ್ರ: ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಲಂಗೆಕರ್ ನಿಧನ
ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಲಂಗೆಕರ್ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ಪುಣೆ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಲಂಗೆಕರ್ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
89 ವರ್ಷದ ಶಿವಾಜಿರಾವ್ ಪಾಟೀಲ್ ಕೊರೊನಾ ವೈರಸ್ಗೆ ತುತ್ತಾಗಿದ್ದರು. ಆದರೆ, ಅದರಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಕಳೆದ ತಿಂಗಳು ಮಾಜಿ ಸಿಎಂಗೆ ಕೊವಿಡ್ ತಗುಲಿತ್ತು. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ ಕೊವಿಡ್ ನೆಗೆಟಿವ್ ಬಂದಿತ್ತು. ನೀಲಂಗೆಕರ್ ಅವರು ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬದ ಆಪ್ತರು ಹೇಳಿದ್ದಾರೆ. ನೀಲಂಗದಲ್ಲಿ ಅವರು ಅಂತಿಮ ಸಂಸ್ಕಾರ ನಡೆಯಲಿದೆ.
ಮರಾಠವಾಡ ಪ್ರದೇಶದ ಲಾತೂರ್ನ ಹಿರಿಯ ಕಾಂಗ್ರೆಸ್ ನಾಯಕರಾದ ಶಿವಾಜಿರಾವ್ ಪಾಟೀಲ್ ನೀಲಂಗೇಕರ್ ಅವರು ಜೂನ್ 1985 ರಿಂದ ಮಾರ್ಚ್ 1986 ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. 1985 ರಲ್ಲಿ ಎಂಡಿ ಪರೀಕ್ಷೆಯ ಫಲಿತಾಂಶದಲ್ಲಿ ವಂಚನೆ ಆರೋಪದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


