ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ಹೇಳಿಕೆ: ಆಂತರಿಕ ವಿಷಯದಲ್ಲಿ ಮಾತನಾಡದಂತೆ ಭಾರತದ ಎಚ್ಚರಿಕೆ
ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಾಮೆಂಟ್ ಮಾಡಿದ್ದು ಭಾರತ ಎಚ್ಚರಿಕೆ ನೀಡಿದೆ.

ನವದೆಹಲಿ: ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಾಮೆಂಟ್ ಮಾಡಿದ್ದು ಭಾರತ ಎಚ್ಚರಿಕೆ ನೀಡಿದೆ.
ಚೀನಾದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅನುರಾಗ್ ಶ್ರೀವಾಸ್ತವ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡದೇ ಇರುವಂತೆ ಚೀನಾಗೆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಬಗ್ಗೆ ಚೀನಾದ ಹೇಳಿಕೆಗಳನ್ನು ಗಮನಿಸಿದ್ದೇವೆ, ಈ ವಿಚಾರವಾಗಿ ಮಾತನಾಡುವುದಕ್ಕೆ ಚೀನಾಗೆ ಮಾನ್ಯತೆ ಇಲ್ಲ. ಬೇರೆ ರಾಷ್ಟ್ರಗಳ ಆಂತರಿಕ ವಿಚಾರಗಳಲ್ಲಿ ಮಾತನಾಡದಂತೆ ಚೀನಾಗೆ ಸಲಹೆ ನೀಡುತ್ತಿದ್ದೇವೆ ಎಂದು ಶ್ರೀವಾಸ್ತವ ತಿಳಿಸಿದ್ದಾರೆ.
ಪಾಕಿಸ್ತಾನದ ಪ್ರತಿನಿಧಿ ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ, ವಿಭಜನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ, ಜಮ್ಮು-ಕಾಶ್ಮೀರದ ವಿಚಾರದಲ್ಲಿ ಏಕಪಕ್ಷೀಯ ಹಾಗೂ ಯಥಾಸ್ಥಿತಿಯ ಬದಲಾವಣೆ ಕಾನೂನಿಗೆ ವಿರುದ್ಧ ಹಾಗೂ ಅಮಾನ್ಯ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಪ್ರತಿಕ್ರಿಯೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


