ಭಾರತದ ಕೋವಿಡ್-19 ಚೇತರಿಕೆ ಪ್ರಮಾಣ ಶೇ.67.19 ಕ್ಕೆ ಏರಿಕೆ: ಮರಣ ಪ್ರಮಾಣ ಶೇ.2.09 ಕ್ಕೆ ಇಳಿಕೆ
ಭಾರತದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ.67.19 ಕ್ಕೆ ಏರಿಕೆಯಾಗಿದ್ದು, ಮರಣದ ಪ್ರಮಾಣ ಶೇ.2.09 ಕ್ಕೆ ಇಳಿಕೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ.67.19 ಕ್ಕೆ ಏರಿಕೆಯಾಗಿದ್ದು, ಮರಣದ ಪ್ರಮಾಣ ಶೇ.2.09 ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 51,706 ಕೊರೋನಾ ರೋಗಿಗಳು ಚೇತರಿಕೆ ಕಂಡಿದ್ದಾರೆ. ಮರಣದ ಪ್ರಮಾಣ ಶೇ.2.09 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಒಟ್ಟಾರೆ 12, 82,215 ರೋಗಿಗಳು ಚೇತರಿಕೆ ಕಂಡಿದ್ದು, ಸಕ್ರಿಯವಾಗಿರುವ ಪ್ರಕರಣಗಳ ಎರಡರಷ್ಟು ಮಂಡಿ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಅತಿ ಹೆಚ್ಚು ಜನರು ಗುಣಮುಖರಾಗಿರುವುದರಿಂದ ಸಕ್ರಿಯ ಪ್ರಕರಣಗಳು 5,86,244 ಕ್ಕೆ ಇಳಿಕೆಯಾಗಿದೆ. ಕೇಂದ್ರದ ಟೆಸ್ಟ್, ಟ್ರ್ಯಾಕ್, ಟ್ರೀಟ್ ಕಾರ್ಯತಂತ್ರದ ಫಲವಾಗಿ ಕೋವಿಡ್-19 ನಿಂದ ಚೇತರಿಕೆ ಕಾಣುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.
ಮಂಗಳವಾರದಂದು 6,19,652 ಪರೀಕ್ಷೆಗಳು ನಡೆದಿದ್ದು, ಒಟ್ಟಾರೆ 2,14,84,402 ಸೋಂಕು ಪರೀಕ್ಷೆಗಳು ಈವರೆಗೂ ನಡೆದಿದೆ, ಇದೇ ವೇಳೆ ಒಂದು ಮಿಲಿಯನ್ ಗೆ 15,568 ಪರೀಕ್ಷೆಗಳು ನಡೆಯುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


