ದೇಶ

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಉಗ್ರರಿಂದ ಬಿಜೆಪಿ ಮುಖಂಡ ಸಾಜದ್' ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಬಿಜೆಪಿ ಮುಖಂಡ ಸಾಜದ್ ಅಹ್ಮದ್ ಖಾಂಡೆಯನ್ನು ಹತ್ಯೆ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಉಗ್ರರಿಂದ ಬಿಜೆಪಿ ಮುಖಂಡ ಸಾಜದ್' ಹತ್ಯೆ
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಬಿಜೆಪಿ ಮುಖಂಡ ಸಾಜದ್ ಅಹ್ಮದ್ ಖಾಂಡೆಯನ್ನು ಹತ್ಯೆ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಸಾಜದ್ ಅವರು ಕುಲ್ಗಾಂ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷಕರಾಗಿದ್ದರು. ಇಂದು ಬೆಳಿಗ್ಗೆ ಸಾಜದ್ ಮನೆಯ ಬಳಿ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. 

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಾಜದ್ ಅವರನ್ನು ಅನಂತ್ ನಾಗ್ ಜಿಲ್ಲೆಯ ಆಸ್ಪತ್ರೆಗೆ ಸಾಗಿಸುವಷ್ಟರದಲ್ಲಿ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

ಕುಲ್ಗಾಂ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ 2ನೇ ದಾಳಿ ಇದಾಗಿದೆ. ಆ.4 ರಂದು ಕುಲ್ಗಾಂ ಜಿಲ್ಲೆಯ ಮತ್ತೊಬ್ಬ ಬಿಜೆಪಿ ಸರ್ಪಂಚ್ ಆಗಿದ್ದ ಅರಿಫ್ ಅಹ್ಮದ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಅದೃಷ್ಟವಶಾಕ್ ಅರಿಫ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.