ದೇಶ

ಲೆಬನಾನ್ ಸ್ಫೋಟ: ಐವರು ಭಾರತೀಯರಿಗೆ ಸಣ್ಣಪುಟ್ಟ ಗಾಯಗಳು- ಎಂಇಎ

ಲೆಬನಾನ್ ನಲ್ಲಿ ಸಂಭವಿಸಿರುವ ಸ್ಫೋಟದಲ್ಲಿ ಐವರು ಭಾರತೀಯರಿಗೆ ಸಣ್ಣ-ಪುಟ್ಟ ಗಾಯಗಳುಂಟಾಗಿವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಲೆಬನಾನ್ ಸ್ಫೋಟ: ಐವರು ಭಾರತೀಯರಿಗೆ ಸಣ್ಣಪುಟ್ಟ ಗಾಯಗಳು- ಎಂಇಎ
ಲೆಬನಾನ್ ಸ್ಫೋಟ: ಐವರು ಭಾರತೀಯರಿಗೆ ಸಣ್ಣಪುಟ್ಟ ಗಾಯಗಳು: ಎಂಇಎ
Published On :

ನವದೆಹಲಿ: ಲೆಬನಾನ್ ನಲ್ಲಿ ಸಂಭವಿಸಿರುವ ಸ್ಫೋಟದಲ್ಲಿ ಐವರು ಭಾರತೀಯರಿಗೆ ಸಣ್ಣ-ಪುಟ್ಟ ಗಾಯಗಳುಂಟಾಗಿವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. 

ವಿದೇಶಾಂಗ ಇಲಾಖೆಯ ವಕ್ತಾರ ಅನುರಾಗ್ ಶ್ರೀವಾಸ್ತವ ಈ ಬಗ್ಗೆ ಮಾತನಾಡಿದ್ದು, ಸ್ಫೋಟದಿಂದ ಉಂಟಾಗಿರುವ ಹಾನಿಯ ಕುರಿತು ಲೆಬನೀಸ್ ಸರ್ಕಾರದಿಂದ ಮಾಹಿತಿ ಕೇಳಿದ್ದೇವೆ, ಮಾಹಿತಿ ಬಂದ ಬಳಿಕ ಯಾವ ಪ್ರಕಾರದ ನೆರವು ನೀಡಬೇಕೆಂಬುದನ್ನು ನಿರ್ಧರಿಸಲಿದ್ದೇವೆ ಎಂದು ತಿಳಿಸಿದ್ದಾರೆ. 

ಅಲ್ಲಿರುವ ಭಾರತೀಯ ಸಮುದಾಯದವರಿಗೆ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ಭಾರತೀಯ ರಾಯಭಾರಿ ಕಚೇರಿ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ ಎಂದು ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ. 

ನಮ್ಮ ರಾಯಭಾರ ಕಚೇರಿ ಭಾರತೀಯ ಸಮುದಾಯ ಹಾಗೂ ಅದಕ್ಕೆ ಸಂಬಂಧಪಟ್ಟವರೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯ ನೆರವು ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮಂಗಳವಾರ ಲೆಬನಾನ್ ನ ರಾಜಧಾನಿ ಬೈರುತ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 130 ಜನರು ಮೃತಪಟ್ಟಿದ್ದು ಸಾವಿರಾರು ಮಂದಿಗೆ ಗಾಯಗಳುಂಟಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.