ಕೊರೋನಾ ವೈರಸ್ ದಾಖಲೆ: ದೇಶಾದ್ಯಂತ ಒಂದೇ ದಿನ 62,538 ಹೊಸ ಸೋಂಕು ಪ್ರಕರಣ ಪತ್ತೆ!
ಮಾರಕ ಕೊರೋನಾ ವೈರಸ್ ಆರ್ಭಟ ಭಾರತದಲ್ಲಿ ಮತ್ತಷ್ಟು ಜೊರಾಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 62,538 ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಆರ್ಭಟ ಭಾರತದಲ್ಲಿ ಮತ್ತಷ್ಟು ಜೊರಾಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 62,538 ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ.
ಹೌದು.. ಇದೇ ಮೊದಲ ಬಾರಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಹೊಸ ಪ್ರಕರಣಗಳ ಸಂಖ್ಯೆ 62 ಸಾವಿರ ಗಡಿದಾಟಿದ್ದು, ನಿನ್ನೆ ಒಂದೇ ದಿನ 62,538 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 20 ಲಕ್ಷ ಗಡಿ ದಾಟಿದ್ದು, ಪ್ರಸ್ತುತ ದೇಶದಲ್ಲಿ ಒಟ್ಟಾರೆ ಸೋಂಕು ಪ್ರಕರಣ 20,27,075ಕ್ಕೆ ಏರಿಕೆಯಾಗಿದೆ.
ಈ ಪೈಕಿ 13,78,106 ಸೋಂಕಿತರು ಗುಣಮುಖರಾಗಿದ್ದು, 41,585 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಪ್ರಸ್ತುತ ದೇಶದಲ್ಲಿ 6,07,384 ಸಕ್ರಿಯ ಪ್ರಕರಣಗಳಿವೆ. ಅಂತೆಯೇ ದೇಶದಲ್ಲಿ ಗುಣಮುಖರಾದವರ ಪ್ರಮಾಣ ಕೂಡ ಏರಿಕೆಯಾಗಿದ್ದು, ಪ್ರಸ್ತುತ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.67.98ಕ್ಕೆ ಏರಿಕೆಯಾಗಿದೆ. ಅಂತೆಯೇ ಪಾಸಿಟಿವಿಟಿ ಪ್ರಮಾಣ ಶೇ.10.88ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೊರೋನಾ ವೈರಸ್ ಆರ್ಭಟ ತೀವ್ರವಾಗಿ ತುತ್ತಾಗಿರುವ ಮಹಾರಾಷ್ಟ್ರದಲ್ಲಿ ಈಗಲೂ 1,46,268 ಸಕ್ರಿಯ ಸೋಂಕು ಪ್ರಕರಣಗಳಿದ್ದು, 3,05,521 ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ ಮಹಾರಾಷ್ಟ್ರದಲ್ಲಿ ಈ ವರೆಗೂ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದವರ ಸಂಖ್ಯೆ 16,476ಕ್ಕೆ ಏರಿಕೆಯಾಗಿದೆ. ಇನ್ನು ತಮಿಳುನಾಡಿನಲ್ಲೂ ಸಹ 54,184 ಸಕ್ರಿಯ ಪ್ರಕರಣಗಳಿದ್ದು, 2,14,815 ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿ 4,461 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇನ್ನು ತೆಲಂಗಾಣದಲ್ಲಿ ಸೋಂಕು ಪ್ರಮಾಣ ಕೊಂಚ ತಗ್ಗಿದ್ದು ನಿನ್ನೆ 2207 ಹೊಸ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ತೆಲಂಗಾಣದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 75,257ಕ್ಕೆ ಏರಿಕೆಯಾಗಿದೆ. ನಿನ್ನೆ ಮತ್ತೆ 12 ಮಂದಿ ಸೋಂಕಿತರು ಸಾವನ್ನಪ್ಪುವ ಮೂಲಕ ಈ ವರೆಗೂ ತೆಲಂಗಾಣದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


