ದೇಶ

ಭಾರತದಲ್ಲಿ ಆಕ್ಸ್‌ಫರ್ಡ್‌ ಕೋವಿಡ್ 19 ಲಸಿಕೆ ಪ್ರತಿ ಡೋಸ್‌ಗೆ 225 ರೂ.: ಸೀರಮ್ ಭಾರತ ಸಂಸ್ಥೆ

ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಕೋವಿಡ್-19 ಲಸಿಕೆ ಉತ್ಪಾದನಾ ಪಾಲುದಾರಿಕೆಯನ್ನು ಹೊಂದಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ 225 ರೂ.ಗೆ ನೀಡುವುದಾಗಿ ಪ್ರಕಟಿಸಿದೆ.

ಭಾರತದಲ್ಲಿ ಆಕ್ಸ್‌ಫರ್ಡ್‌ ಕೋವಿಡ್ 19 ಲಸಿಕೆ ಪ್ರತಿ ಡೋಸ್‌ಗೆ 225 ರೂ.: ಸೀರಮ್ ಭಾರತ ಸಂಸ್ಥೆ
ಲಸಿಕೆ
Published On :

ನವದೆಹಲಿ: ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಕೋವಿಡ್-19 ಲಸಿಕೆ ಉತ್ಪಾದನಾ ಪಾಲುದಾರಿಕೆಯನ್ನು ಹೊಂದಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ 225 ರೂ.ಗೆ ನೀಡುವುದಾಗಿ ಪ್ರಕಟಿಸಿದೆ. 

ಭಾರತ ಸೇರಿದಂತೆ ಕಡಿಮೆ ಮತ್ತು ಮಧ್ಯಮ ಆದಾಯ ಹೊಂದಿರುವ ದೇಶಗಳಿಗೆ 100 ಮಿಲಿಯನ್ ಡೋಸ್ ಕೋವಿಡ್ 19 ಲಸಿಕೆಗಳನ್ನು ತಯಾರಿಸಲು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ 150 ಮಿಲಿಯನ್ ಡಾಲರ್ ಹಣವನ್ನು ಒದಗಿಸುತ್ತದೆ ಎಂದು ಸೀರಮ್ ತಿಳಿಸಿದೆ.

ಅಸ್ಟ್ರಾಜೆನೆಕಾ ಪರವಾನಗಿ ಹೊಂದಿರುವ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಲಸಿಕೆ ಅಭ್ಯರ್ಥಿಯು ಭಾರತ ಮತ್ತು ಇತರ ಹಲವಾರು ದೇಶಗಳಲ್ಲಿ ಕ್ಲಿನಿಕಲ್ ಪ್ರಯೋಗಗಳ ಮುಂದುವರಿದ ಹಂತದಲ್ಲಿದೆ ಮತ್ತು 2021ರ ಮೊದಲಾರ್ಧದಲ್ಲಿ ಸಾರ್ವಜನಿಕ ಬಳಕೆಗೆ ಲಭ್ಯವಾಗುವ ಸಾಧ್ಯತೆಯಿದೆ.

ಅಸ್ಟ್ರಾಜೆನೆಕಾ ಮತ್ತು ನೊವಾವಾಕ್ಸ್ ಲಸಿಕೆಗಳಿಗೆ 3 ಡಾಲರ್ ಬೆಲೆ ನಿಗದಿಪಡಿಸಿ ಜಗತ್ತಿನ ಸುಮಾರು 92 ದೇಶಗಳಲ್ಲಿ ಗಾವಿಯ ಕೋವಾಕ್ಸ್ ಅಡ್ವಾನ್ಸ್ ಮಾರ್ಕೆಟ್ ಕಮಿಟ್ ಮೆಂಟ್ ಕೇಂದ್ರಗಳಲ್ಲಿ ಲಭ್ಯವಾಗುವಂತೆ ಮಾಡುವ ಗುರಿ ಹೊಂದಲಾಗಿದೆ ಎನ್ನಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.