ಜೈ ಶ್ರೀರಾಮ್ ಎನ್ನದ ಮುಸ್ಲಿಂ ಆಟೋ ಚಾಲಕನನ್ನು ಥಳಿಸಿ, ಹಲ್ಲು ಮುರಿದ ದುಷ್ಕರ್ಮಿಗಳು
ಭಯಾನಕ ಘಟನೆಯೊಂದರಲ್ಲಿ ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಇಬ್ಬರು ವ್ಯಕ್ತಿಗಳು ಮನಬಂದಂತೆ ಥಳಿಸಿದ್ದು, ಜೈ ಶ್ರೀ ರಾಮ್ ಮತ್ತು ಮೋದಿ ಜಿಂದಾಬಾದ್ ಎಂದು ಕೂಗುವಂತೆ ಬಲವಂತಪಡಿಸಿರುವ ಘಟನೆ ರಾಜಸ್ಥಾನದ ಸಿಖರ್ ಜಿಲ್ಲೆಯಲ್ಲಿ ನಡೆದಿದೆ.

ಜೈಪುರ: ಭಯಾನಕ ಘಟನೆಯೊಂದರಲ್ಲಿ ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಇಬ್ಬರು ವ್ಯಕ್ತಿಗಳು ಮನಬಂದಂತೆ ಥಳಿಸಿದ್ದು, ಜೈ ಶ್ರೀ ರಾಮ್ ಮತ್ತು ಮೋದಿ ಜಿಂದಾಬಾದ್ ಎಂದು ಕೂಗುವಂತೆ ಬಲವಂತಪಡಿಸಿರುವ ಘಟನೆ ರಾಜಸ್ಥಾನದ ಸಿಖರ್ ಜಿಲ್ಲೆಯಲ್ಲಿ ನಡೆದಿದೆ.
ದುಷ್ಕರ್ಮಿಗಳು ಚಾಲಕನ ಗಡ್ಡವನ್ನು ಎಳೆದು, ಮುಖಕ್ಕೆ ಹೊಡೆದಿದ್ದಾರೆ. ಹಲ್ಲುಗಳು ಹೊರಗೆ ಬರುವಂತೆ ಹಲ್ಲೆ ನಡೆಸಲಾಗಿದೆ. ಪಾಕಿಸ್ತಾನಕ್ಕೆ ಹೋಗುವಂತೆ ಪೀಡಿಸಲಾಗಿದೆ. ಹಲ್ಲೆಯ ನಂತರ 52 ವರ್ಷದ ಗಫಾರ್ ಅಹ್ಮದ್ ಅವರ ಕಣ್ಣು ಮತ್ತು ಕೆನ್ನೆಗಳು ಉಬ್ಬಿಕೊಂಡಿವೆ.
ಕೆಲ ಪ್ರಯಾಣಿಕರನ್ನು ರೈಲು ನಿಲ್ದಾಣಕ್ಕೆ ತಲುಪಿಸಿ ಮರಳುವಾಗ ಈ ಘಟನೆ ನಡೆದಿದೆ. ಹಲ್ಲೆ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ಹಲ್ಲೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಲ್ಲೆಗೊಳಗಾದ ವ್ಯಕ್ತಿ ಗಫಾರ್ ಅಹ್ಮದ್ ತಿಳಿಸಿದ್ದಾರೆ.
ಕೆಲ ಪ್ರಯಾಣಿಕರನ್ನು ರೈಲು ನಿಲ್ದಾಣಕ್ಕೆ ತಲುಪಿಸಿ ಮರಳುತ್ತಿರುವಾಗ ತಮ್ಮನ್ನು ತಡೆದ ವ್ಯಕ್ತಿಗಳು ತಂಬಾಕು ಕೇಳಿದ್ದಾರೆ. ಅದನ್ನು ಕೊಟ್ಟಾಗ ಮೋದಿ ಜಿಂದಾಬಾದ್ ಎಂದು ಹೇಳುವಂತೆ ಸೂಚಿಸಿದ್ದಾರೆ. ಅದನ್ನು ಹೇಳದಿದ್ದಾಗ ಕಪ್ಪಾಳಕ್ಕೆ ಹೊಡೆದಿದ್ದು, ಜೈ ಶ್ರೀರಾಮ್ ಎನ್ನುವಂತೆ ಪೀಡಿಸಿದ್ದಾರೆ. ಇದಕ್ಕೂ ಒಪ್ಪದಿದ್ದಾಗ ಬರ್ಬರ ರೀತಿಯಲ್ಲಿ ಹಲ್ಲೆ ನಡೆಸಲಾಗಿದೆ. 2-3 ಹಲ್ಲುಗಳು ಕಿತ್ತು ಬಂದಿವೆ. ಎಡಕಣ್ಣಿಗೂ ತೀವ್ರ ರೀತಿಯ ಗಾಯವಾಗಿದೆ. ಕೆಲ ಕಾಲ ಪ್ರಜ್ಞೆ ಹೀನನಾಗಿ ಬಿದಿದ್ದು, ನಂತರ ಮನೆಗೆ ವಾಪಸ್ಸಾಗಿರುವುದಾಗಿ
ಅವರು ಎಫ್ ಐಆರ್ ನಲ್ಲಿ ಉಲ್ಲೇಖಿಸಿದ್ದಾರೆ.
ಐಪಿಸಿ ಸೆಕ್ಷನ್ 323, 341, 295ಎ, 504, 506, 327, 382 ಮತ್ತು 34ರ ಅಡಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಫ್ ಐಆರ್ ದಾಖಲಿಸಿದ ಬಳಿಕ ರಾಜೇಂದ್ರ ಜಾಟ್ ಮತ್ತು ಶಂಬು ದಯಾಳ್ ಜಾಟ್ ಎಂಬವರನ್ನು ಬಂಧಿಸಲಾಗಿದೆ. ಇಬ್ಬರೂ ಚಾಲಕರಾಗಿದ್ದು, ವ್ಯವಸಾಯ ಕೂಡಾ ಮಾಡಲಿದ್ದಾರೆ ಎಂದು ಸಿಕರ್ ನ ಸಾದರ್ ಪೊಲೀಸ್ ಠಾಣಾಧಿಕಾರಿ ಪುಷ್ಪೇಂದ್ರ ಸಿಂಗ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


