ಜಮ್ಮು-ಕಾಶ್ಮೀರ: ಉಗ್ರರ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಿಜೆಪಿ ನಾಯಕ ಸಾವು
ಉಗ್ರರ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ ಜಿಲ್ಲಾ ಬಿಜೆಪಿ ಅಧ್ಯಕ್ಷ ಅಬ್ದುಲ್ ಹಮೀದ್ ನಜರ್ ಅವರು ಸೋಮವಾರ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಬುದ್ಗಾಂ: ಉಗ್ರರ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ ಜಿಲ್ಲಾ ಬಿಜೆಪಿ ಅಧ್ಯಕ್ಷ ಅಬ್ದುಲ್ ಹಮೀದ್ ನಜರ್ ಅವರು ಸೋಮವಾರ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಉಗ್ರರು ನಡೆಸಿದ್ದ ದಾಳಿಯಲ್ಲಿ ನಝರ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ನಝರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದರಂತೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಗುರಿಯಾಗಿರಿಸಿಕೊಂಡಿದ್ದು, ಹಲವು ದಿನಗಳಿಂದ ಬಿಜೆಪಿ ನಾಯಕರ ಮೇಲೆ ದಾಳಿ ನಡೆಸುತ್ತಲೇ ಇದ್ದಾರೆ.
ಆಗಸ್ಟ್ 6 ರಂದೂ ಕೂಡ ಬಿಜೆಪಿ ಸರ್ಪಂಚ್ ಸಾಜದ್ ಅಹ್ಮದ್ ಖಾಂಡೆಯವರ ಮೇಲೆ ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ ನಾಜದ್ ಅವರು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು. ಕಳೆದ ಜುಲೈ ತಿಂಗಳಿನಲ್ಲಿಯೂ ಬಂಡಿಪೋರಾದಲ್ಲಿ ಬಿಜೆಪಿ ಅಧ್ಯಕ್ಷ ವಾಸಿಂ ಬರಿ, ಅವರ ತಂದೆ ಹಾಗೂ ಸಹೋದರನನ್ನು ಉಗ್ರರು ಹತ್ಯೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


