ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನಿ ನಂಬರ್ ನಿಂದ ಬೆದರಿಕೆ ಕರೆ
ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಬೆದರಿಕೆ ಬಂದಿದೆ.

ನವದೆಹಲಿ: ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಬೆದರಿಕೆ ಬಂದಿದೆ.
ಸ್ವತಃ ಸಾಕ್ಷಿ ಮಹಾರಾಜ್ ಈ ಬಗ್ಗೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ನಂಬರ್ ನ್ನು ಬಳಕೆ ಮಾಡುತ್ತಿರುವ ವ್ಯಕ್ತಿಯೋರ್ವ ತಮಗೆ ಕರೆ ಮಾಡಿ ತಮ್ಮನ್ನು, ದೇಶದ ಇತರ ಉನ್ನತ ಮಟ್ಟದ ನಾಯಕರನ್ನು ಕೊಲೆ ಮಾಡುವುದಕಾಗಿ ಬೆದರಿಕೆ ಹಾಕಿದ್ದಾನೆಂದು ಹೇಳಿದ್ದಾರೆ.
ಈ ಹಿಂದೆ ಇಂಟರ್ ನೆಟ್ ಮೂಲಕ ಬೆದರಿಕೆ ಬಂದಿತ್ತು. ಅದರ ಮರು ದಿನ ನನಗೆ ಪಾಕಿಸ್ತಾನಿ ನಂಬರ್ ನಿಂದ ಕೊಲೆ ಬೆದರಿಕೆ ಬಂದಿದೆ ನನ್ನನ್ನು ನಿಂದಿಸಿ 10 ದಿನಗಳಲ್ಲಿ ನನ್ನ ಹಾಗೂ ನನ್ನ ಮನೆಯ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ, ಇದರಿಂದ ನಮಗೆ ಭಯ ಉಂಟಾಗಿದ್ದು, ಗೃಹ ಕಾರ್ಯದರ್ಶಿ ಅವಿನಾಶ್ ಅವಸ್ಥಿಗೆ ಕರೆ ಮಾಡಿ ಮಾಹಿತಿ ತಲುಪಿಸಿದೆ ಎಂದು ಹೇಳಿದ್ದಾರೆ.
ಈ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರಿಗೂ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


