ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಕ್ಯಾ.ದೀಪಕ್ ಸಾಠೆ ಅಂತ್ಯಕ್ರಿಯೆ
ಕಳೆದ ಆಗಸ್ಟ್ 7ರಂದು ಕೇರಳದ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ಕ್ಯಾಪ್ಟನ್ ದೀಪಕ್ ಸಾಠೆ(58ವ) ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಮುಂಬೈ: ಕಳೆದ ಆಗಸ್ಟ್ 7ರಂದು ಕೇರಳದ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ಕ್ಯಾಪ್ಟನ್ ದೀಪಕ್ ಸಾಠೆ(58ವ) ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ದುರಂತದಲ್ಲಿ ಮೃತಪಟ್ಟ ಕ್ಯಾಪ್ಟನ್ ದೀಪಕ್ ಸಾಠೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸಚಿವಾಲಯ ತಿಳಿಸಿದೆ.
ಮುಂಬೈಯ ಚಾಂಡಿವಾಲಿ ನಿವಾಸಿಯಾಗಿದ್ದ ಕ್ಯಾಪ್ಟನ್ ಸಾಠೆ ಅವರ ಅಂತ್ಯಕ್ರಿಯೆ ಇಂದು ಅಪರಾಹ್ನ ನೆರವೇರಲಿದೆ. ಸಾಠೆ ಅವರ ಕಾರ್ಯವೈಖರಿಯನ್ನು ಪ್ರಶಂಸಿಸಿರುವ ಮುಖ್ಯಮಂತ್ರಿಗಳ ಸಚಿವಾಲಯ ಅವರ ಜೀವನ ಇಂದಿನ ಯುವಜನತೆಗೆ ಸ್ಪೂರ್ತಿಯಾಗಿದೆ ಎಂದು ಹೇಳಿದೆ.
ಕ್ಯಾಪ್ಟನ್ ಸಾಠೆ ಅವರ ನಿಧನ ನಂತರ ಅವರ ಪತ್ನಿ ಸುಶ್ಮಾ ಮತ್ತು ಇಬ್ಬರು ಪುತ್ರರಲ್ಲಿ ಒಬ್ಬ ಕೇರಳಕ್ಕೆ ಹೋಗಿ ಕಳೆಬರವನ್ನು ವಿಮಾನದಲ್ಲಿ ಮೊನ್ನೆ ಭಾನುವಾರ ತಂದಿದ್ದರು. ನಂತರ ಮೃತದೇಹವನ್ನು ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಸ್ವಲ್ಪ ಹೊತ್ತು ಇಟ್ಟು ನಂತರ ಬಾಬಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
ಅಪಘಾತದಲ್ಲಿ ಮೃತಪಟ್ಟ ಸಹ ಪೈಲಟ್ ಅಖಿಲೇಶ್ ಕುಮಾರ್ ಅವರ ಅಂತ್ಯಕ್ರಿಯೆ ಮೊನ್ನೆ ಭಾನುವಾರ ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮತ್ತು ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ ಪ್ರೆಸ್ ಅಧಿಕಾರಿಗಳ ಸಮ್ಮುಖದಲ್ಲಿ ಅವರ ತವರು ಮಥುರಾದಲ್ಲಿ ನೆರವೇರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


