ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,98,290 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6,98,290 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ಮಾಹಿತಿ ನೀಡಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6,98,290 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ ದೇಶಾದ್ಯಂತ 6,98,290 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 10ರವರೆಗೂ 2,52,81,848 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ ಕೆಲವು 53,601 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 22,68,676ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಒಂದೇ ದಿನ 870 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 45,257ಕ್ಕೆ ಹೆಚ್ಚಳವಾಗಿದೆ. ಈ ನಡುವೆ ಒಂದೇ ದಿನ 48,931 ಮಂದಿ ಚೇತರಿಸಿಕೊಂಡಿದ್ದು, ಗುಣಮುಖರಾದವರ ಸಂಖ್ಯೆ 15,83,490ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 6,39,929 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


