ಛತ್ತೀಸ್ ಘಡದಲ್ಲಿ ಎನ್ ಕೌಂಟರ್: ನಾಲ್ಕು ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು
ನಕ್ಸಲ್ ಪೀಡಿತ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳು ನಾಲ್ಕು ಮಂದಿ ನಕ್ಸಲರನ್ನು ಹೊಡೆದುರುಳಿಸಿದ ಘಟನೆ ನಡೆದಿದೆ.

ಸುಕ್ಮಾ: ನಕ್ಸಲ್ ಪೀಡಿತ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳು ನಾಲ್ಕು ಮಂದಿ ನಕ್ಸಲರನ್ನು ಹೊಡೆದುರುಳಿಸಿದ ಘಟನೆ ನಡೆದಿದೆ.
ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯ ಹೊರವಲಯದ ಜಗರಗುಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಎನ್ಕೌಂಟರ್ ನಡೆದಿದ್ದು, ಘಟನೆಯಲ್ಲಿ ನಾಲ್ಕು ಮಂದಿ ನಕ್ಸಲರು ಹತರಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ), ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಪಡೆಗಳ ಸಿಬ್ಬಂದಿಗಳು ತೊಡಗಿದ್ದರು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಬಸ್ತಾರ್ ) ಸುಂದರ್ ರಾಜ್ ಪಿ ಹೇಳಿದ್ದಾರೆ.
ಮೂಲಗಳ ಪ್ರಕಾರ ಫುಲಂಪಾರ್ ಗ್ರಾಮದಲ್ಲಿ ಸೇನಾಪಡೆಗಳು ಗಸ್ತು ತಿರುಗುತ್ತಿದ್ದಾಗ ಅಲ್ಲಿಯೇ ಬಿಡಾರ ಹೂಡಿದ್ದ ನಕ್ಸಲರು ಏಕಾಏಕಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ. ಈ ವೇಳೆ ನಾಲ್ಕು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಅಂತೆಯೇ ಹಲವು ನಕ್ಸಲರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ನಾಲ್ಕು ಪುರುಷ ನಕ್ಸಲರ ಮೃತದೇಹಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ .303 ರೈಫಲ್ ಗಳನ್ನು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂತೆಯೇ ಶೋಧ ಕಾರ್ಯ ಕೂಡ ತೀವ್ರಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


