ದೇಶ

ಬಿಜೆಪಿಗೆ ತೀವ್ರ ಮುಖಭಂಗ; ರಾಜಸ್ಥಾನ 'ವಿಶ್ವಾಸ' ಗೆದ್ದ ಸಿಎಂ ಅಶೋಕ್ ಗೆಹ್ಲೂಟ್!

ರೆಬೆಲ್ ನಾಯಕ ಸಚಿನ್ ಪೈಲಟ್ ಅವರ ಬಂಡಾಯದಿಂದ ಅತಂತ್ರ ಸ್ಥಿತಿಗೆ ತಲುಪಿದ್ದ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಶ್ವಾಸಮತ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬೀಗಿದೆ.

ಬಿಜೆಪಿಗೆ ತೀವ್ರ ಮುಖಭಂಗ; ರಾಜಸ್ಥಾನ 'ವಿಶ್ವಾಸ' ಗೆದ್ದ ಸಿಎಂ ಅಶೋಕ್ ಗೆಹ್ಲೂಟ್!
ಸಂಗ್ರಹ ಚಿತ್ರ
Published On :

ಬೆಂಗಳೂರು: ರೆಬೆಲ್ ನಾಯಕ ಸಚಿನ್ ಪೈಲಟ್ ಅವರ ಬಂಡಾಯದಿಂದ ಅತಂತ್ರ ಸ್ಥಿತಿಗೆ ತಲುಪಿದ್ದ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಶ್ವಾಸಮತ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬೀಗಿದೆ.

ಶುಕ್ರವಾರ ನಡೆದ ರಾಜಸ್ಥಾನದ ವಿಶೇಷ ಅಧಿವೇಶನದಲ್ಲಿ ಸಿಎಂ ಅಶೋಕ್ ಗೆಹ್ಲೂಟ್ ಸರ್ಕಾರ ವಿಶ್ವಾಸ ಮತ ಯಾಚನೆ ಮಾಡಿದ್ದು, ಈ ವಿಶ್ವಾಸ ಮತಯಾಚನೆಯಲ್ಲಿ ಶಾಸಕರ ವಿಶ್ವಾಸ ಗೆಲ್ಲುವಲ್ಲಿ ಯಶಸ್ವಿಯಾಗಿದೆ. 

ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ಧರಿವಲ್ ಅವರು ಸರ್ಕಾರದ ಪರ ವಿಶ್ವಾಸ ಮಂಡನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ರಾಜಸ್ಥಾನದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಶಾಸಕರ ಕುದುರೆ ವ್ಯಾಪಾರ ಮಾಡಿ ಸರ್ಕಾರ ಉರುಳಿಸಿ ತನ್ನ ಸರ್ಕಾರ ರಚನೆಗೆ ಮುಂದಾಗಿದೆ. ಮಧ್ಯ ಪ್ರದೇಶ, ಮಣಿಪುರ ಮತ್ತು ಗೋವಾದಲ್ಲಿ ಕೇಂದ್ರ ಸರ್ಕಾರ ಇದೇ ಕೆಲಸ ಮಾಡಿತ್ತು. ರಾಜಸ್ಥಾನದಲ್ಲೂ ಇದೇ ಕಾರ್ಯಕ್ಕೆ ಮುಂದಾಗಿದೆ. ತನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರವನ್ನು ಉರುಳಿಸುವ ಕಾರ್ಯಕ್ಕೆ ಮುಂದಾಗಿದೆ. ಆದರೆ ಈ ಕಾರ್ಯದಲ್ಲಿ ಬಿಜೆಪಿ ಸಫಲವಾಗಿಲ್ಲ. ರಾಜಸ್ಥಾನವನ್ನು ಸೋಲಿಸಲು ಬಂದ ರಾಜ ಅಕ್ಪರ್ ಮೇವಾಡದ ಒಗ್ಗಟ್ಟಿನ ಶಕ್ತಿಯಿಂದಾಗಿ ಮೊದಲ ಬಾರಿಗೆ ಸೋಲಿನ ಕಂಡಿದ್ದ ಎಂದು ಹೇಳಿದರು.

ಬಳಿಕ ಮಾತನಾಡಿದ ಸಿಎಂ ಅಶೋಕ್ ಗೆಹ್ಲೂಟ್ ಅವರು, ಜನ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷ ರಾಜಸ್ಥಾನದಲ್ಲಿ ಸರ್ಕಾರ ರಚನೆ ಮಾಡಿದೆ. ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ತನ್ನ ಎದುರಾಳಿಗಳನ್ನು ಹಣಿಯಲು ಇಡಿ, ಸಿಬಿಐ, ಆದಾಯ ತೆರಿಗೆ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. 

ಶಾಸಕರ ವಿಶ್ವಾಸ ಗೆದ್ದ ಗೆಹ್ಲೂಟ್ ಗೆ 125 ಮತ
ಇನ್ನು ವಿಶ್ವಾಸ ಮತಯಾಚನೆಯಲ್ಲಿ ಸಿಎಂ ಅಶೋಕ್ ಗೆಹ್ಲೂಟ್ ಪರವಾಗಿ ಒಟ್ಟು 125 ಶಾಸಕರು ಮತ ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜಸ್ಛಾನದ ಒಟ್ಟಾರೆ 200 ಸದಸ್ಯ ಬಲದ ಪೈಕಿ 125 ಶಾಸಕರು ಗೆಹ್ಲೂಟ್ ಪರ ಮತ ಚಲಾಯಿಸಿದ್ದಾರೆ.  

ರಾಜಸ್ಥಾನ ವಿಧಾನಸಭೆ: ಸಂಖ್ಯಾ ಬಲ (200)
ಆಡಳಿತರೂಢ ಪಕ್ಷ 

ಕಾಂಗ್ರೆಸ್ -107 (ಪೈಲಟ್ ಬೆಂಬಲಿಗರು-19,  ಬಿಎಸ್‌ಪಿ- 6)  
ಆರ್‌ಎಲ್‌ಡಿ -1
ಸ್ವತಂತ್ರರು- 13
ಬಿಟಿಪಿ-2
ಎಡಪಕ್ಷ-  2
ಒಟ್ಟು- 125

ವಿರೋಧಪಕ್ಷ 
ಬಿಜೆಪಿ-72
ಆರ್‌ಎಲ್‌ಪಿ-3 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.