ದೇಶ

12ನೇ ತರಗತಿ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ಐಚ್ಛಿಕ ಪರೀಕ್ಷೆ

12ನೇ ತರಗತಿಯ ಪರೀಕ್ಷೆಯಲ್ಲಿ ತಮ್ಮ ಅಂಕಗಳಿಕೆಯ ಸಾಧನೆಯನ್ನು ಸುಧಾರಿಸಲು ಐಚ್ಛಿಕ ಪರೀಕ್ಷೆಗಳು ಸೆಪ್ಟೆಂಬರ್ ನಲ್ಲಿ ನಡೆಯಲಿವೆ ಎಂದು ಸಿಬಿಎಸ್ಇ ತಿಳಿಸಿದೆ.

12ನೇ ತರಗತಿ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ಐಚ್ಛಿಕ ಪರೀಕ್ಷೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: 12ನೇ ತರಗತಿಯ ಪರೀಕ್ಷೆಯಲ್ಲಿ ತಮ್ಮ ಅಂಕಗಳಿಕೆಯ ಸಾಧನೆಯನ್ನು ಸುಧಾರಿಸಲು ಐಚ್ಛಿಕ ಪರೀಕ್ಷೆಗಳು ಸೆಪ್ಟೆಂಬರ್ ನಲ್ಲಿ ನಡೆಯಲಿವೆ ಎಂದು ಸಿಬಿಎಸ್ಇ ತಿಳಿಸಿದೆ.

ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಪರೀಕ್ಷೆ ಫಲಿತಾಂಶಗಳನ್ನು ರದ್ದುಪಡಿಸಿದ್ದ ಸಿಬಿಎಸ್ಇ ಕಳೆದ ತಿಂಗಳು ಬದಲಿ ಮೌಲ್ಯಮಾಪನ ಯೋಜನೆ ಮೂಲಕ ಅಂಕಗಳನ್ನು ನೀಡಿತ್ತು. ಸೆಪ್ಟೆಂಬರ್ ನಲ್ಲಿ 10 ಮತ್ತು 12ನೇ ತರಗತಿಗೆ ಐಚ್ಛಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು ಸದ್ಯದಲ್ಲಿಯೇ ದಿನಾಂಕ ಪ್ರಕಟಿಸಲಾಗುವುದು ಎಂದರು.

ತಮ್ಮ ಅಂಕಗಳಿಕೆಯನ್ನು ಹೆಚ್ಚಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಸೆಪ್ಟೆಂಬರ್ ನಲ್ಲಿ ನಡೆಯುವ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಇದರ ಜೊತೆಗೆ 10 ಮತ್ತು 12ನೇ ತರಗತಿಗೆ ಕಂಪಾರ್ಟ್ ಮೆಂಟ್ ಪರೀಕ್ಷೆ ಸಹ ನಡೆಯಲಿವೆ, ಸದ್ಯದಲ್ಲಿಯೇ ದಿನಾಂಕ ಘೋಷಿಸಲಾಗುವುದು ಎಂದು ಸಿಬಿಎಸ್ಇ ಪರೀಕ್ಷಾ ನಿಯಂತ್ರಕಿ ಸನ್ಯಮ್ ಭಾರದ್ವಾಜ್ ತಿಳಿಸಿದ್ದಾರೆ. 

ಆ ಐಚ್ಛಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.