ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ: ಸೇನಾ ಆಸ್ಪತ್ರೆ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ಚೇತರಿಕೆ ಕಂಡುಬಂದಿಲ್ಲ ಎಂದು ದೆಹಲಿಯ ಸೇನಾ ರೆಫರಲ್ ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ.

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ಚೇತರಿಕೆ ಕಂಡುಬಂದಿಲ್ಲ ಎಂದು ದೆಹಲಿಯ ಸೇನಾ ರೆಫರಲ್ ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ.
ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕಳೆದ ಆಗಸ್ಚ್ 10ರಂದು ಪ್ರಣಬ್ ಮುಖರ್ಜಿ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿತ್ತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


