ಕೊರೋನಾ ವೈರಸ್ ನಿಂದ ದೆಹಲಿ ಸುರಕ್ಷಿತ ಎನಿಸುವವರೆಗೂ ಶಾಲೆಗಳ ತೆರೆಯುವುದಿಲ್ಲ: ಸಿಎಂ ಕೇಜ್ರಿವಾಲ್
ಕೊರೋನಾ ವೈರಸ್ ನಿಂದ ದೆಹಲಿ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎನಿಸುವವರೆಗೂ ಶಾಲೆಗಳನ್ನು ತೆರೆಯುವ ಪ್ರಶ್ನೆಯೇ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.

ನವದೆಹಲಿ: ಕೊರೋನಾ ವೈರಸ್ ನಿಂದ ದೆಹಲಿ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎನಿಸುವವರೆಗೂ ಶಾಲೆಗಳನ್ನು ತೆರೆಯುವ ಪ್ರಶ್ನೆಯೇ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿ ಜನತೆಯನ್ನುದ್ದೇಶಿಸಿ ಮಾತನಾಡಿರುವ ಅವರು. ಎರಡು ತಿಂಗಳಿಗೆ ಹೋಲಿಕೆ ಮಾಡಿದರೆ ದೆಹಲಿಯಲ್ಲಿ ಇದೀಗ ಪರಿಸ್ಥಿತಿ ಸುಧಾರಿಸಿದೆ. ಇದರ ಯಶಸ್ಸು ಎಲ್ಲಾ ಕೊರೋನಾ ವಾರಿಯರ್ಸ್'ಗಳು ಹಾಗೂ ಸಂಘಟನೆಗಳಿಗೆ ಸಲ್ಲಬೇಕು ಎಂದು ಹೇಳಿದ್ದಾರೆ.
ಆಮ್ ಆದ್ಮಿ ಸರ್ಕಾರಕ್ಕೆ ಶಾಲಾ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಆರೋಗ್ಯ ಹೆಚ್ಚು ಮುಖ್ಯ. ಸದ್ಯಕ್ಕೆ ಶಾಲೆಗಳನ್ನು ಪುನರಾರಂಭಿಸುವುದು ಬೇಡ ಎಂಬುದು ಬಹುತೇಕ ಪೋಷಕರ ಸಲಹೆಯಾಗಿದೆ. ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


