ದೇಶ

ಸ್ವಾತಂತ್ರ್ಯ ದಿನಾಚರಣೆ: ಕಾಂಗ್ರೆಸ್ ಇತಿಹಾಸದ ಕುರಿತ ವೆಬ್ ಸೀರೀಸ್ ನ್ನು ಹಂಚಿಕೊಂಡ ರಾಹುಲ್ ಗಾಂಧಿ 

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಇತಿಹಾಸದ ಕುರಿತ ವೆಬ್ ಸೀರೀಸ್ ನ್ನು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ: ಕಾಂಗ್ರೆಸ್ ಇತಿಹಾಸದ ಕುರಿತ ವೆಬ್ ಸೀರೀಸ್ ನ್ನು ಹಂಚಿಕೊಂಡ ರಾಹುಲ್ ಗಾಂಧಿ 
ಸ್ವಾತಂತ್ರ್ಯ ದಿನಾಚರಣೆ: ಕಾಂಗ್ರೆಸ್ ಇತಿಹಾಸದ ಕುರಿತ ವೆಬ್ ಸೀರೀಸ್ ನ್ನು ಹಂಚಿಕೊಂಡ ರಾಹುಲ್ ಗಾಂಧಿ
Published On :

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಇತಿಹಾಸದ ಕುರಿತ ವೆಬ್ ಸೀರೀಸ್ ನ್ನು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 

ಕಾಂಗ್ರೆಸ್ ಕುರಿತಾದ ವೆಬ್ ಸೀರೀಸ್ ನ ಮೊದಲ ಸಂಚಿಕೆ ಇದಾಗಿದ್ದು, ಧರೋಹರ್ ಎಂಬ ಹೆಸರನ್ನು ನೀಡಲಾಗಿದೆ. 

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ನ ಪಯಣ ಹಾಗೂ ಪಾತ್ರವನ್ನು ಈ ವೆಬ್ ಸೀರೀಸ್ ನಲ್ಲಿ ತಿಳಿಸಲಾಗಿದೆ. 

ಕಾಂಗ್ರೆಸ್- ದೇಶದ ಪರವಾದ ಧ್ವನಿ ಇರುವ ಸಿದ್ಧಾಂತ ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ. 

ವೆಬ್ ಸೀರೀಸ್ ಬಗ್ಗೆ ಎಐಸಿಸಿ ವಕ್ತಾರ ರಣ್ದೀಪ್ ಸುರ್ಜೇವಾಲ ಮಾತನಾಡಿದ್ದು, ಭಾರತವನ್ನು ಸೃಷ್ಟಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿತ್ತು. ವೆಬ್ ಸೀರೀಸ್ ಧರೋಹರ್ 135 ವರ್ಷಗಳ ಕಾಂಗ್ರೆಸ್ ಇತಿಹಾಸವನ್ನು ತಿಳಿಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.