ನೂತನ ಶಿಕ್ಷಣ ನೀತಿ ಮಕ್ಕಳು ತಮ್ಮ ಮೂಲದೊಂದಿಗೆ ಸಂಪರ್ಕಿಸಲು ನೆರವಾಗುತ್ತದೆ: ಪ್ರಧಾನಿ ಮೋದಿ
ನೂತನ ಶಿಕ್ಷಣ ನೀತಿ ಮಕ್ಕಳು ತಮ್ಮ ಮೂಲ ಬೇರಿನೊಂದಿಗೆ ಸಂಪರ್ಕಿಸಲು ನೆರವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನವದೆಹಲಿ: ನೂತನ ಶಿಕ್ಷಣ ನೀತಿ ಮಕ್ಕಳು ತಮ್ಮ ಮೂಲ ಬೇರಿನೊಂದಿಗೆ ಸಂಪರ್ಕಿಸಲು ನೆರವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ಇಂದು 74ನೇ ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, 'ಕೇಂದ್ರ ಸರ್ಕಾರ ಜಾರಿಗೆ ತರವು ಮುಂದಾಗಿರುವ ಎನ್ಇಪಿ- ರಾಷ್ಟ್ರೀಯ ಶಿಕ್ಷಣ ನೀತಿ ಮಕ್ಕಳು ತಮ್ಮ ಮೂಲ ಬೇರಿನೊಂದಿಗೆ ಸಂಪರ್ಕಿಸಲು ನೆರವಾಗುತ್ತದೆ. ಆ ಮೂಲಕ ಮಕ್ಕಳನ್ನು ಜಾಗತಿಕ ನಾಗರಿಕರನ್ನಾಗಿಸುತ್ತದೆ ಎಂದು ಹೇಳಿದರು.
ಅಂತೆಯೇ ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಶಿಕ್ಷಣದ ಮಹತ್ವದ ಕುರಿತು ಒತ್ತಿ ಹೇಳಿದ ಪ್ರಧಾನಿ ಮೋದಿ, ಸ್ವಾವಲಂಬಿ ಭಾರತವನ್ನು ನಿರ್ಮಿಸುವಲ್ಲಿ, ಆಧುನಿಕ ಭಾರತವನ್ನು ನಿರ್ಮಿಸುವಲ್ಲಿ, ಹೊಸ ಭಾರತವನ್ನು ನಿರ್ಮಿಸುವಲ್ಲಿ, ಸಮೃದ್ಧ ಭಾರತವನ್ನು ನಿರ್ಮಿಸುವಲ್ಲಿ ಶಿಕ್ಷಣವು ಮಹತ್ವದ್ದಾಗಿದೆ. ಈ ಚಿಂತನೆಯೊಂದಿಗೆ, ದೇಶವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಿದೆ. ‘ಆತ್ಮನಿರ್ಭರ ಭಾರತ’ (ಸ್ವಾವಲಂಬಿ ಭಾರತ)ದ ಕರೆ ಜನರ ಕಲ್ಪನೆಯನ್ನು ಅರ್ಥೈಸಿಕೊಂಡಿದ್ದು, ಇದು ಎಲ್ಲರ ‘ಮಂತ್ರ’ವಾಗಿ ಮಾರ್ಪಟ್ಟಿದೆ ಎಂದು ಹೇಳಿದರು.
ಇನ್ನು ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದು ಸತತ 7ನೇ ಸ್ವಾತ್ರಂತ್ರ್ಯ ದಿನಾಚರಣೆ ಭಾಷಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


