ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ: ಪುತ್ರ ಅಭಿಜಿತ್ ಟ್ವೀಟ್
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ.

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ.
ದೆಹಲಿಯ ಸೇನಾ ರೆಫರಲ್ ಆಸ್ಪತ್ರೆಯಲ್ಲಿ ಪ್ರಣಬ್ ಮುಖರ್ಜಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಣಬ್ ಅವರ ಆರೋಗ್ಯದಲ್ಲಿ ಪ್ರಸ್ತುತ ಚೇತರಿಕೆ ಕಂಡುಬಂದಿದೆ ಎಂದು ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಭಿಜಿತ್ ಮುಖರ್ಜಿ ಅವರು, ದೇವದ ದಯೆ ಮತ್ತು ನಿಮ್ಮ ಹಾರೈಕೆಯಿಂದಾಗಿ ನಮ್ಮ ತಂದೆ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ. ಶೀಘ್ರದಲ್ಲೇ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಕಳೆದ ಆಗಸ್ಚ್ 10ರಂದು ಪ್ರಣಬ್ ಮುಖರ್ಜಿ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


