ಕೊರೋನಾ ವೈರಸ್: ಭಾರತದಲ್ಲಿ ಮರಣ ಪ್ರಮಾಣ ಶೇ.2 ಕ್ಕಿಂತ ಕಡಿಮೆ: ಆರೋಗ್ಯ ಸಚಿವಾಲಯ
ಭಾರತದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ದೇಶದಲ್ಲಿ ಕೊರೋನಾ ಮರಣ ಪ್ರಮಾಣ ತೀರಾ ಕಡಿಮೆ ಇದೆ ಎಂದು ಹೇಳಲಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ದೇಶದಲ್ಲಿ ಕೊರೋನಾ ಮರಣ ಪ್ರಮಾಣ ತೀರಾ ಕಡಿಮೆ ಇದೆ ಎಂದು ಹೇಳಲಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತಗ್ಗಿದ್ದು, ಈ ಹಿಂದೆ 3.3ರಷ್ಟಿದ್ದ ಮರಣ ಪ್ರಮಾಣ ಇದೀಗ ಶೇ.2ಕ್ಕಿಂತ ಕಡಿಮೆಗೆ ಕುಸಿದಿದೆ. ಪ್ರಸ್ತುತ ದೇಶದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ 1.94ಕ್ಕೆ ಕುಸಿತವಾಗಿದೆ. ಇದು ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ತೀರಾ ಕಡಿಮೆ ಎಂದು ಹೇಳಿದೆ.
ಇನ್ನು ಅಮೆರಿಕದಲ್ಲಿ ಕೇವಲ 23 ದಿನಗಳಲ್ಲಿ 50 ಸಾವಿರ ಕೊರೋನಾ ಸಾವು ಸಂಭವಿಸಿತ್ತು. ಬ್ರೆಜಿಲ್ ನಲ್ಲಿ 95 ದಿನದಲ್ಲಿ50 ಸಾವಿರ ಸಾವು ಸಂಭವಿಸಿತ್ತು. ಮೆಕ್ಸಿಕೋದಲ್ಲಿ 141 ದಿನದಲ್ಲಿ 50 ಸಾವಿರ ಸಾವು ಸಂಭವಿಸಿತ್ತು. ಆದರೆ ಭಾರತದಲ್ಲಿ ಈ ಪ್ರಮಾಣಕ್ಕೆ ತಗುಲಿದ್ದು ಬರಬ್ಬರಿ 156 ದಿನಗಳು ತಗುಲಿದೆ. ಇದು ಭಾರತದಲ್ಲಿ ಕೊರೋನಾ ವೈರಸ್ ಸಾವಿನ ಪ್ರಮಾಣ ನಿಧಾನಗತಿಯಲ್ಲಿದೆ ಎಂಬುದನ್ನು ಸೂಚಿಸುತ್ತದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಕಳೆದ ಜೂನ್ 18ರಂದು ದೇಶದಲ್ಲಿ ಕೊರೋನಾ ವೈರಸ್ ಪ್ರಮಾಣ ಗರಿಷ್ಠ 3.33ಕ್ಕೆ ಏರಿಕೆಯಾಗಿತ್ತು. ಬಳಿಕ ಈ ಪ್ರಮಾಣ ಗಣನೀಯವಾಗಿ ತಗ್ಗಿದ್ದು, ಜುಲೈ 14ರ ಹೊತ್ತಿಗೆ ಇದು 2.57ಕ್ಕೆ ಕುಸಿದಿತ್ತು. ಇದೀಗ ಅಂದರೆ ಆಗಸ್ಟ್ 15ರ ಹೊತ್ತಿಗೆ 1.94ಕ್ಕೆ ಕುಸಿದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕುಸಿಯಲಿದೆ ಎಂದು ಸಚಿವಾಲಯ ವಿಶ್ವಾಸ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


