ವಾಜಪೇಯಿ ಪುಣ್ಯಸ್ಮರಣೆ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರ ನಮನ
ಇಂದು ದೇಶದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಎರಡನೇ ವರ್ಷದ ಪುಣ್ಯಸ್ಮರಣೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಸ್ಮೃತಿ ಸ್ಥಲ್ ಸದೇವ್ ಅಟಲ್ ತಲುಪಿ ಅಟಲ್ ಜೀ ಅವರಿಗೆ ಗೌರವ ಸಲ್ಲಿಸಿದರು.

ನವದೆಹಲಿ: ಇಂದು ದೇಶದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಎರಡನೇ ವರ್ಷದ ಪುಣ್ಯಸ್ಮರಣೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಸ್ಮೃತಿ ಸ್ಥಲ್ ಸದೇವ್ ಅಟಲ್ ತಲುಪಿ ಅಟಲ್ ಜೀ ಅವರಿಗೆ ಗೌರವ ಸಲ್ಲಿಸಿದರು.
ಭಾರತದ ರತ್ನದಿಂದ ಗೌರವಿಸಲ್ಪಟ್ಟ ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆಗಸ್ಟ್ 16, 2018 ರಂದು ತಮ್ಮ 93ನೇ ವಯಸ್ಸಿನಲ್ಲಿ ನಿಧನರಾಗಿದ್ದರು.
ವಾಜಪೇಯಿ ಅವರು 1996ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದರು. ಆದರೆ, ಈ ಸಮಯದಲ್ಲಿ ಅವರ ಸರ್ಕಾರವು ಕೇವಲ 13 ದಿನಗಳವರೆಗೆ ಅಧಿಕಾರ ನಡೆಸಿತ್ತು. ಇದರ ನಂತರ ಅವರು 1998ರಲ್ಲಿ ಮತ್ತೆ ಪ್ರಧಾನಿಯಾದರು. ಆದರೆ, ಈ ಬಾರಿ ಅವರ ಸರ್ಕಾರ ಕೇವಲ 13 ತಿಂಗಳುಗಳು ಕಾಲ ನಡೆಯಿತು. ಅಂತಿಮವಾಗಿ 1999ರಲ್ಲಿ ಮತ್ತೊಮ್ಮೆ, ವಾಜಪೇಯಿ ಮೂರನೇ ಬಾರಿಗೆ ಪ್ರಧಾನಿಯಾಗಿ 5 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


