ದೇಶದಲ್ಲಿ 3 ಕೋಟಿ ಗಡಿ ದಾಟಿದ ಕೋವಿಡ್-19 ಪರೀಕ್ಷೆ
ದೇಶದಲ್ಲಿ ಕೋವಿಡ್-19 ಸೋಂಕು ಪತ್ತೆಗಾಗಿ ಒಟ್ಟಾರೇ ಪರೀಕ್ಷೆಗಳ ಸಂಖ್ಯೆ 3 ಕೋಟಿ ಗಡಿ ದಾಟಿದೆ. ಡಿಜಿಟಲ್ ಲ್ಯಾಬ್ ನೆಟ್ ವರ್ಕ್ ಮತ್ತು ದೇಶಾದ್ಯಂತ ಸುಲಭ ಪರೀಕ್ಷೆಯ ಮೂಲಕ ಹೊಸ ಮೈಲುಗಲ್ಲು ಸಾಧಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕು ಪತ್ತೆಗಾಗಿ ಒಟ್ಟಾರೇ ಪರೀಕ್ಷೆಗಳ ಸಂಖ್ಯೆ 3 ಕೋಟಿ ಗಡಿ ದಾಟಿದೆ. ಡಿಜಿಟಲ್ ಲ್ಯಾಬ್ ನೆಟ್ ವರ್ಕ್ ಮತ್ತು ದೇಶಾದ್ಯಂತ ಸುಲಭ ಪರೀಕ್ಷೆಯ ಮೂಲಕ ಹೊಸ ಮೈಲುಗಲ್ಲು ಸಾಧಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾನುವಾರ 7 ಲಕ್ಷದ 31 ಸಾವಿರದ 697 ಪರೀಕ್ಷೆ ಸೇರಿದಂತೆ ಆಗಸ್ಟ್ 16ರವರೆಗೂ 3,00,14, 400 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಹೇಳಿದೆ.
ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನಿರಂತರ,ಸಮನ್ವಯತೆಯ ಪ್ರಯತ್ನದಿಂದ ದೇಶದಲ್ಲಿ ಮೂರು ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 7,31,697 ಪರೀಕ್ಷೆಗಳನ್ನು ನಡೆಸಲಾಗಿದ್ದು, ಪ್ರತಿದಿನ ಪರೀಕ್ಷೆ ಸಾಮರ್ಥ್ಯವನ್ನು 10ಕ್ಕೆ ಏರಿಸಲಾಗಿದ್ದು, ಅತ್ಯುತ್ತಮ ಸಾಧನೆ ಮಾಡಲಾಗಿದೆ.ಜುಲೈ 14ರಿಂದ 1.2 ಕೋಟಿಯಲ್ಲಿದ್ದ ಪರೀಕ್ಷೆ ಸಂಖ್ಯೆ ಆಗಸ್ಟ್ 16ರವರೆಗೆ ಮೂರು ಕೋಟಿ ಆಗಿದೆ. ಇದೇ ಅವಧಿಯಲ್ಲಿ ಪಾಸಿಟಿವ್ ದರ ಶೇ. 7. 5 ರಿಂದ 8.81ಕ್ಕೆ ಏರಿಕೆಯಾಗಿದ್ದು, ಮರಣ ಪ್ರಮಾಣ ಕಡಿಮೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


