ದೇಶ

ಸಂಸತ್ ಭವನದಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ ದೌಡಾಯಿಸಿದ 6 ಅಗ್ನಿಶಾಮಕ ವಾಹನಗಳು

ಮುಂಗಾರು ಅಧಿವೇಶನಕ್ಕೆ ಸಿದ್ಧತೆಗಳು ನಡೆದಿರುವ ನಡುವಲ್ಲೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ಸಂಸತ್ ಭವನ ಕಟ್ಟಡದ 6ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಸೋಮವಾರ ತಿಳಿದುಬಂದಿದೆ.

ಸಂಸತ್ ಭವನದಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ ದೌಡಾಯಿಸಿದ 6 ಅಗ್ನಿಶಾಮಕ ವಾಹನಗಳು
ಸಂಗ್ರಹ ಚಿತ್ರ
Published On :

ನವದೆಹಲಿ: ಮುಂಗಾರು ಅಧಿವೇಶನಕ್ಕೆ ಸಿದ್ಧತೆಗಳು ನಡೆದಿರುವ ನಡುವಲ್ಲೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ಸಂಸತ್ ಭವನ ಕಟ್ಟಡದ 6ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಸೋಮವಾರ ತಿಳಿದುಬಂದಿದೆ.

ಇಂದು ಬೆಳಗಿನ ಜಾವ ಕಟ್ಟಡದ 6ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ದೌಡಾಯಿಸುವ 6ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. 

ಬೆಳಿಗ್ಗೆ 7.30ರ ಸುಮಾರಿಗೆ ಅಗ್ನಿಅವಘಡ ಸಂಭವಿಸಿರುವುದಾಗಿ ದೂರವಾಣಿ ಕರೆ ಬಂದಿದ್ದು, ಕೂಡಲೇ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಯಿತು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಪ್ರಸ್ತುತ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.